ಮಧುಗಿರಿಯಲ್ಲಿ ವಾಂತಿಭೇದಿಗೆ ಇಬ್ಬರ ಸಾವು, ಇನ್ನಿಬ್ಬರಿಗೆ ಚಿಕಿತ್ಸೆ

ಮಧುಗಿರಿ: ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿಯಲ್ಲಿ ವಾಂತಿ ಭೇದಿಯಿಂದಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ವಾಂತಿಭೇದಿಯಿಂದಾಗಿ ತೀವ್ರವಾಗಿ ಅಸ್ವಸ್ಥರಾಗಿರುವ ಇನ್ನೂ ಇಬ್ಬರು ರೋಗಿಗಳಿಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಕುರಿತು ಮಾಹಿತಿ ದೊರೆಯುತ್ತಿದ್ದಂತೆ ತುಮಕೂರು ಜಿಲ್ಲಾಸ್ಪತ್ರೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಗೃಹ ಸಚಿವರಿಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಹಾಗೂ ಎಸ್ ಪಿ ಅಶೋಕ್ ವೆಂಕಟ್, ಆರೋಗ್ಯ ಅಧಿಕಾರಿಗಳು ಘಟನೆಯ ಕುರಿತು ಮಾಹಿತಿ ನೀಡಿದರು. ಗೃಹಸಚಿವರು ಅಸ್ವಸ್ಥರ ಆರೋಗ್ಯ ವಿಚಾರಿಸಿದರು. ವಾಂತಿ ಭೇದಿಗೆ ಕಾರಣವೇನು ಎಂದು ಡಿಹೆಚ್ ಒ ಡಾ.ಮಂಜುನಾಥ್ ರಿಂದ ಮಾಹಿತಿ ಪಡೆದರು.

More articles

Latest article

Most read