ಕರ್ನಾಟಕ ರಾಜ್ಯದ ಹಿರಿಯ ರಾಜಕಾರಣಿ, ಸಮಾಜವಾದಿ ನಾಯಕ, ಮಾಜಿ ವಿಧಾನಸಭಾ ಅಧ್ಯಕ್ಷ ಹಾಗೂ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪರಿಗೆ ಒಂದೇ ದಿನ ಎರಡೆರಡು ಡಾಕ್ಟರೇಟ್ ಗೌರವಕ್ಕೆ ಭಾಜನರಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಎರಡು ಪ್ರಮುಖ ವಿಶ್ವವಿದ್ಯಾನಿಲಯಗಳಾದ ಕುವೆಂಪು ವಿಶ್ವವಿದ್ಯಾಲಯ ಮತ್ತು ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳು, ಕಾಗೋಡು ತಿಮ್ಮಪ್ಪ ಅವರ ರಾಜಕೀಯ ಕ್ಷೇತ್ರದಲ್ಲಿನ ಸೇವೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ಕೊಡುವುದಾಗಿ ಘೋಸಿದ್ದಾವೆ.
ಎರಡು ಘಟಿಕೋತ್ಸವ ಕಾರ್ಯಕ್ರಮಗಳು, ಇದೇ ತಿಂಗಳ 22ನೇ ತಾರೀಕಿನಂದು ನಡೆಯುತ್ತಿದ್ದು, ಬೆಳಗ್ಗೆ 10:30 ಕುವೆಂಪು ವಿಶ್ವವಿದ್ಯಾಲಯದ 22ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪಡೆದ ನಂತರ, ಅದೇ ದಿನ ಮಧ್ಯಾಹ್ನ 2 ಗಂಟೆಗೆ ಸಾಗರ ತಾಲ್ಲೂಕು ಇರುವಕ್ಕಿಯಲ್ಲಿರುವ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕ್ಯಾಂಪಸ್ ಅಲ್ಲಿ 9ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ.
ಗುರುವಾರ ಸಂಜೆ ಸಾಗರದ ಜೋಸೆಫ್ ನಗರದಲ್ಲಿರುವ ಕೃಷಿ ವಿಶ್ವವಿದ್ಯಾಲಯದ ಅಧಿಕಾರಿಗಳು ಡಾಕ್ಟರೇಟ್ ಪದವಿ ನೀಡುವ ಬಗ್ಗೆ ಘೋಷಣೆ ಮಾಡಿ ಹೋಗಿದ್ದರು. ಧೀಡಿರನೆ ಶುಕ್ರವಾರ ಕಾಗೋಡು ತಿಮ್ಮಪ್ಪ ರವರ ನಿವಾಸಕ್ಕೆ ಭೇಟಿ ನೀಡಿದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊಫೆಸರ್ ಶರತ್ ಅನಂತಮೂರ್ತಿರವರು ಇದೇ 22ನೇ ತಾರೀಕಿಗೆ ನಡೆಯಲಿರುವ 34ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ರವರಿಗೆ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.
ಕೃಷಿ ಮತ್ತು ತೋಟಗಾರಿಕೆ ವಿವಿಯ ಕುಲಪತಿ ಪ್ರೋ.ಆರ್.ಸಿ.ಜಗದೀಶ್ ನೇತೃತ್ವದಲ್ಲಿ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ, ಗೌರವ ಡಾಕ್ಟರೇಟ್ ಸ್ವೀಕರಿಸುವುದಾಗಿ ಆಹ್ವಾನ ನೀಡಿ ಬಂದಿದ್ದಾರೆ