ಜಮ್ಮು ಮತ್ತು ಕಾಶ್ಮೀರ: ನುಸುಳಲು ಯತ್ನಸಿದ ಇಬ್ಬರು ಉಗ್ರರ ಹತ್ಯೆ

Most read

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ಪಾರ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ ಸಮೀಪ ಒಳನುಸುಳಲು ಪ್ರಯತ್ನ ನಡೆಸುತ್ತಿದ್ದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಗುಂಡಿಕ್ಕಿ ಹತ್ಯೆ ಮಾಡಿದೆ ಎಂದು ಭದ್ರತಾ ಪಡೆ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ರಾತ್ರಿ ಕುಪ್ಪಾರದ ಗಡಿ ನಿಯಂತ್ರಣ ರೇಖೆ ಬಳಿ ಅನುಮಾನಾಸ್ಪಪದವಾಗಿ ಸಂಚರಿಸುತ್ತಿದ್ದ  ಇವರ ಚಲನವಲನವನ್ನು ಅವಲೋಕಿಸಿದ ಭದ್ರತಾ ಪಡೆ ಯೋಧರು ದಾಳಿ ನಡೆಸಿದ್ದಾರೆ. ಆಗ ಪರಸ್ಪರ ಗುಂಡಿನ ದಾಳಿ ನಡೆದಿದ್ದು, ಇಬ್ಬರನ್ನೂ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿನ್ನೆ ಸೋಮವಾರ ಗಡಿಯಲ್ಲಿ ಉಗ್ರರು ಒಳನುಸುಳುವ ಪ್ರಯತ್ನ ನಡೆಸಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ ಭಾರತೀಯ ಸೈನ್ಯ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಕುಪ್ಪಾರದ ಮಚ್ಚಲ್ ವಲಯದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಇವರ ನಡವಳಿಕೆ ಅನುಮಾನಸ್ಪದವಾಗಿ ಕಂಡು ಬರುತ್ತಿದ್ದಂತೆ ಭದ್ರತಾ ಪಡೆಗಳು ಅವರನ್ನು ಹಿಮ್ಮೆಟ್ಟಿಸಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಆಗ ಇವರನ್ನು ಹತ್ಯೆ ಮಾಡಲಾಗಿದೆ.  ಈ ಉಗ್ರರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಶ್ರೀನಗರ ಮೂಲದ ಚಿನಾರ್ ಪೊಲೀಸರು ಮಾಹಿತಿ ನೀಡಿದ್ದಾರೆ.

More articles

Latest article