ಬೆಂಗಳೂರು; ಬೈಕ್ ಕಳವು ಮಾಡುತ್ತಿದ್ದ 12 ಅಂತರಾಜ್ಯ ಕಳ್ಳರನ್ನು ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳ ಪೊಲೀಸರು ಬಂಧಿಸಿದ್ದಾರೆ. ಆರ್.ಟಿ.ನಗರ, ಸೋಲದೇವನಹಳ್ಳಿ, ಬಾಗಲಗುಂಟೆ, ಚಿಕ್ಕಜಾಲ, ಎಲೆಕ್ಟ್ರಾನಿಕ್ ಸಿಟಿ, ಬಾಣಸವಾಡಿ, ಕಾಡುಗೋಡಿ ಪೊಲೀಸರು ಆರೋಪಿಗಳನ್ನು ಬಂಧಿಸಿ ಅವರು ಕಳವು ಮಾಡಿದ್ದ 14 ಲಕ್ಷ ರೂ. ಮೌಲ್ಯದ 61 ಬೈಕ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇವರು ದೇವಸ್ಥಾನ, ಜಾತ್ರೆ ಮತ್ತು ನೋ ಪಾರ್ಕಿಂಗ್ಗಳಲ್ಲಿ ಕಳ್ಳತನ ಮಾಡುತ್ತಿದ್ದರು. ಆರೋಪಿಗಳು ಕಳವು ಮಾಡಲು ತಮ್ಮದೇ ಆದ ತಂತ್ರಗಳನ್ನು ರೂಪಿಸಿಕೊಂಡಿದ್ದರು. ಕದ್ದ ಬೈಕ್ಗಳಲ್ಲಿ ಸರಗಳ್ಳತನ ಕೂಡಾ ಮಾಡುತ್ತಿದ್ದರು.
ಇವರು ವಿಶೇಷವಾಗಿ ಆರ್ಎಕ್ಸ್ ಬೈಕ್ಗಳನ್ನೇ ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದರು. ಈ ರೀತಿ ಕದ್ದು ಮಾರಾಟ ಮಾಡುತ್ತಿದ್ದ ಇಮ್ರಾನ್ ಮತ್ತು ಸಮೀರ್ನನ್ನು ಆರ್.ಟಿ.ನಗರ ಪೊಲೀಸರು ಬಂಧಿಸಿದ್ದಾರೆ. ವಾಹನದ ಬಿಡಿ ಭಾಗಗಳನ್ನು ಬಿಚ್ಚಿ ಓಎಲ್ಎಕ್ಸ್ ಮೂಲಕವೂ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕಳ್ಳತನದ ದೃಶ್ಯ ಹಲವಾರು ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.
ಮತ್ತೊಂದು ಪ್ರಕರಣದಲ್ಲಿ ತಡರಾತ್ರಿ ತೆರೆದ ಮನೆಗಳನ್ನು ಗುರಿಯಾಗಿಸಿಕೊಂಡು ಮೊಬೈಲ್, ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಗಲು ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಗಳು ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದರು. ಉತ್ತರಾಖಂಡ ಮೂಲದ ಜತಿನ್, ಮನೀಶ್ ಬಂಧಿತ ಆರೋಪಿಗಳು. ಇವರು ಕದ್ದ ಬೈಕ್ಗಳಲ್ಲಿಯೇ ಹೋಗಿ ಕಳ್ಳತನ ಮಾಡುತ್ತಿದ್ದರು. ಇವರಿಂದ 14 ಲಕ್ಷ ಮೌಲ್ಯದ 11 ಬೈಕ್ಗಳು, 21 ಮೊಬೈಲ್, 21 ಗ್ರಾಂ ಚಿನ್ನಾಭರಣವನ್ನು ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು ವಶಕ್ಕೆ ಪಡೆದ್ದಾರೆ.