ಕುಂದಾಪುರ ಬೀಚ್ ನಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಉಡುಪಿ: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶನಿವಾರ ಬೆಳಿಗ್ಗೆ ಬೀಜಾಡಿ ಬೀಚ್ ನಲ್ಲಿ ಸಂಭವಿಸಿದೆ. ಸ್ನೇಹಿತನ ಮದುವೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಬಂದ ಯುವಕರ ತಂಡವೊಂದು ಸಮುದ್ರದಲ್ಲಿ ಈಜಲು ತೆರಳಿದಾಗ ಈ ದುರಂತ ಸಂಭವಿಸಿದೆ. ಬೆಂಗಳೂರಿನ ದಾಸರಹಳ್ಳಿಯ ಸಂತೋಷ್ (25) ಉಸಿರುಗಟ್ಟಿ ಸಾವನ್ನಪ್ಪಿದ್ದರೆ ಕುಂದಾಪುರ ಮೂಲದ ಅಜಯ್ (25) ನೀರುಪಾಲಾಗಿ ನಾಪತ್ತೆಯಾಗಿದ್ದಾರೆ.

ಸ್ನೇಹಿತನ ಮದುವೆಯಲ್ಲಿ ಪಾಲ್ಗೊಳ್ಳಲು ನಾಲ್ವರು ಸ್ನೇಹಿತರು ಬೆಂಗಳೂರಿನಿಂದ ಕುಂದಾಪುರಕ್ಕೆ ಬಂದಿದ್ದು ಬೀಜಾಡಿ ಬೀಚ್ ಪಕ್ಕದ ರೆಸಾರ್ಟ್ ವೊಂದರಲ್ಲಿ ಉಳಿದುಕೊಂಡಿದ್ದರು. ಇಂದು ಬೆಳಗ್ಗೆ ಮೂವರು ಸಮುದ್ರದಲ್ಲಿ ಈಜಲು ತೆರಳಿದ ವೇಳೆ ಇಬ್ಬರು ಸಮುದ್ರ ಪಾಲಾಗಿದ್ದಾರೆ. ಈ ಪೈಕಿ ಸಂತೋಷ್ ಅವರನ್ನು ಜೊತೆಗಿದ್ದ ಮೋಕ್ಷಿತ್ ಮೇಲೆತ್ತಿ ದಡಕ್ಕೆ ತಂದಿದ್ದಾರೆ. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ. ಕುಂದಾಪುರ ಮೂಲದ ಅಜಯ್ ನೀರಿನ ಸೆಳೆತಕ್ಕೆ ಸಿಲುಕಿ ನೀರು ಪಾಲಾಗಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳ, ಕರಾವಳಿ ಕಾವಲು ಪಡೆ, ಮುಳುಗು ತಜ್ಞರ ತಂಡ ಆಗಮಿಸಿದ್ದು, ಅಜಯ್ ಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ತಿಪಟೂರು ಮೂಲದ ಯುವಕನೊನಬ್ಬ ಇಲ್ಲಿಗೆ ಸ್ನೇಹಿತನ ಮದುವೆಯಲ್ಲಿ ಭಾಗವಹಿಸಲು ಬಂದಿದ್ದಾಗ ಇದೇ ಬೀಜಾಡಿ ಸಮುದ್ರದಲ್ಲಿ ಈಜಲು ಹೋಗಿ ಮೃತಪಟ್ಟ ಘಟನೆಯ ನೆನಪು ಮಾಸುವ ಮುನ್ನವೇ ಮತ್ತೊಂದು ದುರಂತ ನಡೆದಿದೆ.

More articles

Latest article

Most read