ತ್ರಿಶಾ ವಿರುದ್ಧ ಅವಹೇಳನಕಾರಿ ಹೇಳಿಕೆ : ಉದಯನಿಧಿ ಸ್ಟಾಲಿನ್‌ ಬಂಧನ

ಚೆನ್ನೈ: ತಂಜಾವೂರಿನಲ್ಲಿ ಸೋಮವಾರ ನಡೆದ ರೈತರ ಪ್ರತಿಭಟನೆಯ ವೇಳೆ ನೀಡಿದ ಹೇಳಿಕೆಗಾಗಿ ತಮಿಳುನಾಡು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ. ಬಂಧನಕ್ಕೂ ಮುನ್ನ, ನೀಲಂಕರೈನಲ್ಲಿರುವ ಉದಯನಿಧಿ ಅವರ ನಿವಾಸಕ್ಕೆ ಪೊಲೀಸ್ ಅಧಿಕಾರಿಗಳು ಆಗಮಿಸಿದಾಗ ಅಲ್ಲಿ ತೀವ್ರ ಹೈಡ್ರಾಮಾ ನಡೆಯಿತು.

ತಂಜಾವೂರಿನಲ್ಲಿ ರೈತರ ಪ್ರತಿಭಟನೆಯ ವೇಳೆ ಉದಯನಿಧಿ ನೀಡಿದ ಹೇಳಿಕೆಗಳ ಸುತ್ತ ರಾಜಕೀಯ ವಿವಾದ ಭುಗಿಲೆದ್ದಿರುವಾಗಲೇ ಈ ಬೆಳವಣಿಗೆ ನಡೆದಿದೆ.
ಏತನ್ಮಧ್ಯೆ, ಪಕ್ಷದ ನಾಯಕನಿಗೆ ರಕ್ಷಣೆ ಕೋರಿ ಡಿಎಂಕೆ ಮದ್ರಾಸ್ ಹೈಕೋರ್ಟ್‌ನ ಮೊರೆ ಹೋಗಿದೆ.

ಸಭೆಯೊಂದನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ, ಉದಯನಿಧಿ ಅವರು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರನ್ನು ಟೀಕಿಸುತ್ತಿದ್ದ ವೇಳೆ, ಜನಸಂದಣಿಯಲ್ಲಿದ್ದ ವ್ಯಕ್ತಿಯೊಬ್ಬರು ತಮಿಳು ನಟಿಯೊಬ್ಬರ ಹೆಸರನ್ನು ಪ್ರಸ್ತಾಪಿಸಿದರು. ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ಉದಯನಿಧಿ, ದ್ವಂದ್ವಾರ್ಥವನ್ನು ಒಳಗೊಂಡಿದೆ ಎಂದು ಆರೋಪಿಸಲಾದ ಹೇಳಿಕೆಯೊಂದನ್ನು ನೀಡಿದರು.

ಈ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ರಾಜಕೀಯ ವಿರೋಧಿಗಳಿಂದ ವ್ಯಾಪಕ ಟೀಕೆಗೆ ಗುರಿಯಾಗಿದೆ.

ಆಡಳಿತಾರೂಢ ‘ತಮಿಳಗ ವೆಟ್ರಿ ಕಳಗಂ’ ಪಕ್ಷದ ಬೆಂಬಲಿಗರು ಮತ್ತು ಇತರರು ಈ ಹೇಳಿಕೆಯನ್ನು ಟೀಕಿಸಿದ್ದು, ಇದು ವಿರೋಧ ಪಕ್ಷದ ನಾಯಕನೊಬ್ಬನಿಗೆ ತರವಲ್ಲದ ಮಾತು ಎಂದು ಹೇಳಿದ್ದಾರೆ. ಅಲ್ಲದೆ, ಕಾವೇರಿ ನದಿ ನೀರು ಹಂಚಿಕೆ ವಿವಾದದಂತಹ ಪ್ರಮುಖ ವಿಷಯಗಳಿಂದ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ಇದಾಗಿದೆ ಎಂದು ಆರೋಪಿಸಿದ್ದಾರೆ.

ಈ ಹೇಳಿಕೆಗಳಿಗಾಗಿ ಬಿಜೆಪಿ ಕೂಡ ಉದಯನಿಧಿ ವಿರುದ್ಧ ವಾಗ್ದಾಳಿ ನಡೆಸಿದೆ. ಬಿಜೆಪಿಯ ಮುಖ್ಯ ವಕ್ತಾರ ನಾರಾಯಣನ್ ತಿರುಪತಿ ಅವರು ಈ ಹೇಳಿಕೆಯನ್ನು “ಅಸಹ್ಯಕರ, ಅಶ್ಲೀಲ, ಒರಟು ಮತ್ತು ನಾಚಿಕೆಗೇಡಿನದು” ಎಂದು ಬಣ್ಣಿಸಿ ಖಂಡಿಸಿದ್ದಾರೆ ಹಾಗೂ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

“‘ದ್ರಾವಿಡ ಮಾದರಿ’ಯನ್ನು ಪ್ರತಿನಿಧಿಸುವುದಾಗಿ ಹೇಳಿಕೊಳ್ಳುವವರು ಸಾರ್ವಜನಿಕವಾಗಿ ಇಂತಹ ಅಸಭ್ಯ ಹೇಳಿಕೆಗಳನ್ನು ನೀಡುತ್ತಿರುವುದನ್ನು ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮೌನವಾಗಿ ವೀಕ್ಷಿಸುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ತಿರುಪತಿ ಹೇಳಿದ್ದಾರೆ.

ಉದಯನಿಧಿ ಅವರ ಹೇಳಿಕೆಗಳು ಮತ್ತು ಅವರ ನಿವಾಸದಲ್ಲಿ ನಡೆದ ಪೊಲೀಸ್ ಕಾರ್ಯಾಚರಣೆಯ ವಿಷಯವಾಗಿ ಎದುರಾಳಿ ಪಕ್ಷಗಳು ಡಿಎಂಕೆಯನ್ನು ಗುರಿಯಾಗಿಸುತ್ತಿರುವುದರಿಂದ, ತಮಿಳುನಾಡಿನಲ್ಲಿ ರಾಜಕೀಯ ಸಂಘರ್ಷ ತೀವ್ರಗೊಂಡಿದೆ.

ಉದಯನಿಧಿ ಅವರು ಯಾವುದೇ ಮಹಿಳೆಯನ್ನು ಗುರಿಯಾಗಿಸಿಕೊಂಡು ಮಾತನಾಡಿಲ್ಲ ಎಂದು ಡಿಎಂಕೆ ನಾಯಕ ಹಾಗೂ ಲೋಕಸಭಾ ಸಂಸದ ಟಿ.ಆರ್. ಬಾಲು ಹೇಳಿದ್ದಾರೆ. ಅಲ್ಲದೆ, ಈ ಕುರಿತಾದ ವರದಿಗಳು “ಸುಳ್ಳು” ಎಂದು ಅವರು ತಿಳಿಸಿದ್ದಾರೆ.

More articles

Latest article

Most read