Saturday, July 27, 2024

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಹಿಡಿತ ಕಳೆದುಕೊಂಡ್ರ ಶೋಭಾ ಕರಂದ್ಲಾಜೆ? : ಜಯಪ್ರಕಾಶ್ ಹೆಗ್ಡೆ ಕಣಕ್ಕಿಳಿಸಲು ಕಾಂಗ್ರೆಸ್ ಸಿದ್ದತೆ!

Most read

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಗೋಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆಯೂ ಶೋಭಾ ಕರಂದ್ಲಾಜೆ  ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಆದರೆ ಆಕಾಂಕ್ಷಿಗಳಿದ್ದರೂ ಕಾಂಗ್ರೆಸ್ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರಿಗೆ ಮಣೆ ಹಾಕೋದು ನಿಚ್ಚಳವಾಗಿದೆ.

2012ರ ಉಪಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಗೆದ್ದಿದ್ದ ಜಯಪ್ರಕಾಶ್ ಹೆಗ್ಡೆ ಬಿಜೆಪಿ ಸೇರಿ, ಪ್ರಸ್ತುತ ಬಿಜೆಪಿಯಲ್ಲಿದ್ದಾರೆ. ಬಿಜೆಪಿ ಸರ್ಕಾರ ಅವರನ್ನ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿಸಿತ್ತು. ಸರ್ಕಾರ ಬದಲಾದರು ಹೆಗ್ಡೆಯನ್ನ ಅಧ್ಯಕ್ಷರಾಗಿ ಮುಂದುವರಿಸಿದ್ದಾರೆ. ಇದೀಗ ಲೋಕಸಭಾ ಚುನಾವಣೆ ಎದುರಾಗಿದ್ದು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ವಿರುದ್ಧ ಜಯಪ್ರಕಾಶ್ ಹೆಗ್ಡೆಯೇ ಕಣಕ್ಕಿಳಿಸಲು ಕಾಂಗ್ರೆಸ್ ಪ್ಲಾನ್ ಮಾಡಿದೆ.

ಸರ್ಕಾರಕ್ಕೆ ಜಾತಿ ಜನ ಗಣತಿ ವರದಿ (Caste Cencus Report) ಸಲ್ಲಿಸಿರುವ ಜಯಪ್ರಕಾಶ್ ಹೆಗ್ಡೆ (Jayaprakash Hegde) ಸದ್ಯದಲ್ಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿಯಾಗಲಿದ್ದಾರೆ ಎಂನ ಚರ್ಚೆಗಳು ನಡೆಯುತ್ತಿವೆ.

ಮಾರ್ಚ್ 3ರಂದು ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಗ್ಯಾರಂಟಿ ಸಮಾವೇಶದಲ್ಲಿ ಸಿದ್ದರಾಮಯ್ಯ-ಡಿಕೆಶಿ ನೇತೃತ್ವದಲ್ಲಿ ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ಗೆ ಮರಳಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.

ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿ ಬಿಜೆಪಿ ಸೇರಿದ್ದ ಜಯಪ್ರಕಾಶ್ ಹೆಗ್ಡೆ, ಬಿಜೆಪಿ ಟಿಕೆಟ್ ನೀಡಿಲ್ಲ. ಎರಡನೇ ಬಾರಿ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಿತ್ತು. ಇದೀಗ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡದಿದ್ದರೆ ಮತ್ತೆ ಕಾಂಗ್ರೆಸ್ಸಿಗೆ ಸೇರುವ ಎಲ್ಲಾ ಸಾಧ್ಯತೆಗಳು ಕಂಡುಬರುತ್ತಿದೆ. 

ಸದ್ಯ ಶೋಭಾ ಕರಂದ್ಲಾಜೆ ಅವರು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಹಿಡಿತ ಕಳೆದುಕೊಂಡಿದ್ದರು, ಸ್ವಪಕ್ಷ ಕಾರ್ಯಕರ್ತರು, ನಾಯಕರಿಂದ ತೀರ್ವ ವಿರೋಧಕ್ಕೆ ಒಳಗಾಗಿದ್ದಾರೆ. ಆದಷ್ಟು ಬೇಗ ಜಯಪ್ರಕಾಶ್ ಅವರು ಈ ಕುರಿತು ತೀರ್ಮಾನ ತೆಗೆದುಕೊಂಡರೆ ಕ್ಷೇತ್ರದ ಜನ ಹೆಗ್ಡೆ ಅವರಿಗೆ ಸಂಪೂರ್ಣ ಬೆಂಬಲ ಕೊಡುವ ಸಾಧ್ಯತೆಗಳಿವೆ. ಈ ಕುರಿತು ಬೇಗ ನಿರ್ಧಾರ ತೆಗೆದುಕೊಳ್ಳಿ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಒತ್ತಡ ಹಾಕುತ್ತಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಉಡುಪಿಯಲ್ಲಿ ಐದಕ್ಕೆ ಐದು ಬಿಜೆಪಿ ಗೆದ್ದಿದ್ದರೆ, ಚಿಕ್ಕಮಗಳೂರಿನಲ್ಲಿ ಐದಕ್ಕೆ ಐದು ಕಾಂಗ್ರೆಸ್ ಗೆದ್ದಿದೆ. ಶೋಭಾ ಕರಂದ್ಲಾಜೆ ಅವರಿಗೆ ಸ್ವಪಕ್ಚದಲ್ಲೇ ವಿರೋಧ ವ್ಯಕ್ತವಾಗಿರುವುದು ಕಾಂಗ್ರೆಸ್ ಗೆ ಪ್ಲಸ್ ಆಗಲಿದೆ ಎಂಬುದು ಲೆಕ್ಕಾಚಾರ.

More articles

Latest article