ರಷ್ಯಾವು ಉಕ್ರೇನ್ ಮೇಲೆ ಸರಣಿ ಕ್ಷಿಪಣಿ ದಾಳಿ ನಡೆಸಿದ್ದು ಸಾವು ನೋವುಗಳು ಹೆಚ್ಚುತ್ತಲೆ ಇದೆ. ಉಕ್ರೇನ್ ಮಕ್ಕಳ ಆಸ್ಪತ್ರೆ ಮೇಲೆ ರಷ್ಯಾ ಕ್ಷಿಪಣಿ ದಾಳಿ ಮಾಡಿದ್ದು, ಇದರ ಪರಿಣಾಮ 37 ಮಂದಿ ಸಾವನಪ್ಪಿದ್ದರೆ, 170ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ರಷ್ಯಾದ ಕ್ಷಿಪಣಿಗಳು ಉಕ್ರೇನ್‌ನ ಅತಿ ದೊಡ್ಡ ಮಕ್ಕಳ ಆಸ್ಪತ್ರೆಯಾಗಿರುವ ‘ಕೈವ್’ಗೆ ಅಪ್ಪಳಿಸಿದ್ದು, ಇದರ ಪರಿಣಾಮ 37 ಮಂದಿ ಮೃತರಾಗಿದ್ದಾರೆ. ಇದರಲ್ಲಿ 13 ಮಕ್ಕಳು ಕೂಡ ಒಳಗೊಂಡಿದ್ದಾರೆ. ಮಕ್ಕಳ ಸೇರಿ ನೂರಾರು ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಉಕ್ರೇನ್ ಅಧ್ಯಕ್ಷ, ರಷ್ಯಾವು ಉಕ್ರೇನ್ನ ಮಕ್ಕಳ ಆಸ್ಪತ್ರೆ ಮೇಲೆ ಕ್ಷಿಪಣಿ ಹಾರಿಸುವ ಮೂಲಕ ಯಂಗ್ ಕ್ಯಾನ್ಸರ್ ಮಕ್ಕಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದೆ. ಇದು ಅತ್ಯಂತ ಕ್ರೂರ ದಾಳಿ ಎಂದು ಹೇಳಿಕೊಂಡಿದ್ದಾರೆ.
ಮುಂದುವರೆದು, ಪ್ರಧಾನಿ ಮೋದಿಯವರು ರಷ್ಯಾದ ಅಧ್ಯಕ್ಷ ಪುಟಿನ್ ಅವರನ್ನು ಅಪ್ಪಿಕೊಂಡಿದ್ದು ಭಾರೀ ನಿರಾಸೆ ತಂದಿದೆ ಎಂದ ಅವರು, ದಾಳಿ ನಡೆದ ದಿನವೇ ಮಾಸ್ಕೋದಲ್ಲಿ ವಿಶ್ವದ ಅತ್ಯಂತ ರಕ್ತಸಿಕ್ತ ಕ್ರಿಮಿನಲ್ನನ್ನು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ನಾಯಕ ಅಪ್ಪಿಕೊಳ್ಳುವುದನ್ನು ನೋಡುವುದು ಶಾಂತಿಯ ಪ್ರಯತ್ನಗಳಿಗೆ ಭಾರೀ ನಿರಾಶೆಯಾಗುತ್ತಿದೆ ಎಂದು ಹೇಳಿದ್ದಾರೆ.
ಇದು ಹಲವು ತಿಂಗಳಲ್ಲಿಯೇ ಕೀವ್‌ನಲ್ಲಿ ನಡೆದ ಅತಿದೊಡ್ಡ ಸ್ಫೋಟವಾಗಿದ್ದು, ರಷ್ಯಾದ ಅತ್ಯಾಧುನಿಕ ಶಸ್ತ್ರಾಸ್ತ್ರಗಳಲ್ಲಿ ಒಂದಾದ ಕಿಂಜಲ್ ಹೈಪರ್ಸಾನಿಕ್ ಕ್ಷಿಪಣಿ ದಾಳಿಯನ್ನೂ ಒಳಗೊಂಡಿದೆ ಎಂದು ಉಕ್ರೇನ್ ವಾಯುಪಡೆ ತಿಳಿಸಿದೆ.
ಪ್ರಧಾನಿ ಮೋದಿ ಎರಡು ದಿನಗಳ ರಷ್ಯಾ ಪ್ರವಾಸ ಕೈಗೊಂಡಿದ್ದರು, ಈ ವೇಳೆ ರಷ್ಯಾ ಉಕ್ರೇನ್ ಮೇಲೆ ಸರಣಿ ಕ್ಷಿಪಣಿ ದಾಳಿ ನಡೆಸಿ ಹಲವು ಸಾವು ನೋವುಗಳಿಗೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಪ್ರಧಾನಿ ಮೋದಿ ರಷ್ಯಾವು ಭಾರತದ ಸಾರ್ವಕಾಲಿಕ ಸ್ನೇಹಿತ ಎಂದು ಬಣ್ಣಿಸಿದ್ದರು.