ಕಾವೇರಿ ನೀರಿನ ಕುರಿತ CWRC ಆದೇಶ ಅವೈಜ್ಞಾನಿಕ, ಕರ್ನಾಟಕ ಯಾವುದೇ ಕಾರಣಕ್ಕೂ ಒಂದು ಹನಿ ನೀರೂ ಬಿಡಬಾರದು: ಟಿ.ಎ. ನಾರಾಯಣಗೌಡ

ಬೆಂಗಳೂರು : ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕವು ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್‌ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ನೀಡಿರುವ ನಿರ್ದೇಶನವು ಸಂಪೂರ್ಣವಾಗಿ ಅವೈಜ್ಞಾನಿಕ, ವಾಸ್ತವ ಪರಿಸ್ಥಿತಿಯನ್ನು ನಿರ್ಲಕ್ಷಿಸಿರುವ ಹಾಗೂ ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾದ ಆದೇಶವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವರ್ಷ ಕಾವೇರಿ ಜಲಾನಯನ ಪ್ರದೇಶದಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದೆ. ಕೆಆರ್‌ಎಸ್‌, ಕಬಿನಿ ಸೇರಿದಂತೆ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಳವಳಕಾರಿ ಮಟ್ಟದಲ್ಲಿದೆ. ಈಗಿರುವ ನೀರು ರಾಜ್ಯದ ಜನರ ಕುಡಿಯುವ ನೀರಿನ ಅಗತ್ಯವನ್ನೇ ಸಂಪೂರ್ಣವಾಗಿ ಪೂರೈಸಲು ಸಾಕಾಗದ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ಕರ್ನಾಟಕದಿಂದ ನಾಲ್ಕೂವರೆ ಟಿಎಂಸಿಗೂ ಹೆಚ್ಚು ನೀರನ್ನು ತಮಿಳುನಾಡಿಗೆ ಹರಿಸುವಂತೆ ಆದೇಶಿಸುವುದು ವಾಸ್ತವ ಸ್ಥಿತಿಗೆ ಕಣ್ಣು ಮುಚ್ಚಿಕೊಂಡು ತೆಗೆದುಕೊಂಡ ನಿರ್ಧಾರವಾಗಿದೆ.

ಕುಡಿಯುವ ನೀರು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು. ಅದರ ಜೊತೆಗೆ ರಾಜ್ಯದ ರೈತರ ಬೆಳೆ ಹಾಗೂ ಜೀವನೋಪಾಯವನ್ನು ರಕ್ಷಿಸುವುದು ಕರ್ನಾಟಕ ಸರ್ಕಾರದ ಮೊದಲ ಜವಾಬ್ದಾರಿಯಾಗಿದೆ. ರಾಜ್ಯದ ಜನರ ಅಗತ್ಯಗಳನ್ನು ಕಡೆಗಣಿಸಿ ನೀರು ಹರಿಸುವುದು ಯಾವುದೇ ದೃಷ್ಟಿಯಿಂದಲೂ ನ್ಯಾಯಸಮ್ಮತವಲ್ಲ. ಆದ್ದರಿಂದ ಕರ್ನಾಟಕ ಸರ್ಕಾರ ಯಾವುದೇ ಕಾರಣಕ್ಕೂ ಈ ಆದೇಶವನ್ನು ಪಾಲಿಸಬಾರದು ಮತ್ತು ಒಂದು ಹನಿ ನೀರನ್ನೂ ತಮಿಳುನಾಡಿಗೆ ಬಿಡುಗಡೆ ಮಾಡಬಾರದು.

ರಾಜ್ಯ ಸರ್ಕಾರ ತಕ್ಷಣವೇ ಈ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)ದ ಮುಂದೆ ಪ್ರಶ್ನಿಸಿ, ಕರ್ನಾಟಕದ ವಾಸ್ತವ ಜಲಸ್ಥಿತಿಯನ್ನು ಸಮಗ್ರವಾಗಿ ಮಂಡಿಸಬೇಕು. ಅಗತ್ಯವಿದ್ದರೆ ಮುಂದಿನ ಕಾನೂನುಬದ್ಧ ಕ್ರಮಗಳನ್ನು ಕೈಗೊಂಡು ರಾಜ್ಯದ ಹಕ್ಕು ಮತ್ತು ಜನರ ಹಿತಾಸಕ್ತಿಯನ್ನು ರಕ್ಷಿಸಬೇಕು ಎಂದು ತಿಳಿಸಿದ್ದಾರೆ.

ಒಂದು ವೇಳೆ ಈ ಅವೈಜ್ಞಾನಿಕ ಆದೇಶವನ್ನು ಅನುಸರಿಸಿ ಕರ್ನಾಟಕ ಸರ್ಕಾರ ನೀರು ಬಿಡುಗಡೆ ಮಾಡಿದರೆ, ಅದರ ವಿರುದ್ಧ ರಾಜ್ಯಾದ್ಯಂತ, ವಿಶೇಷವಾಗಿ ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ತೀವ್ರ ಜನಾಕ್ರೋಶ ವ್ಯಕ್ತವಾಗುವ ಸಾಧ್ಯತೆಯಿದೆ. ಇಂತಹ ಪರಿಸ್ಥಿತಿಗೆ ಸರ್ಕಾರವೇ ನೇರ ಹೊಣೆಗಾರವಾಗಲಿದೆ.
ಕರ್ನಾಟಕ ರಕ್ಷಣಾ ವೇದಿಕೆ ಈ ಆದೇಶವನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ರಾಜ್ಯದ ಹಿತಾಸಕ್ತಿ, ರೈತರ ಬದುಕು ಹಾಗೂ ಕುಡಿಯುವ ನೀರಿನ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಈ ಆದೇಶದ ವಿರುದ್ಧ ರಾಜ್ಯಾದ್ಯಂತ ತೀವ್ರ ಸ್ವರೂಪದ ಪ್ರಜಾಸತ್ತಾತ್ಮಕ ಹೋರಾಟವನ್ನು ಸಂಘಟಿಸಲಿದೆ. ಸರ್ಕಾರ ರಾಜ್ಯದ ಜನರ ಭಾವನೆಗಳಿಗೆ ಗೌರವ ನೀಡಿ, ಕರ್ನಾಟಕದ ಹಿತಾಸಕ್ತಿಯನ್ನು ಅಗ್ರಸ್ಥಾನದಲ್ಲಿರಿಸಿ ನಿರ್ಧಾರ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸುತ್ತದೆ.

More articles

Latest article

Most read