ಎಸ್ಸಿ/ಎಸ್ಟಿ ಸಮುದಾಯಗಳ 5 ಲಕ್ಷ ಮಹಿಳೆಯರಿಗೆ ಲಾಭದಾಯಕವಾಗುವಂತೆ ಐದು ವರ್ಷಗಳ ಅವಧಿಯೊಂದಿಗೆ ಟರ್ಮ್ ಲೋನ್ಗಳನ್ನು ನೀಡಲು ಹೊಸ ಯೋಜನೆ ಪ್ರಾರಂಭ.
ಮೇಕ್ ಇನ್ ಇಂಡಿಯಾ ಬ್ರ್ಯಾಂಡ್ನೊಂದಿಗೆ ಆಟಿಕೆಗಳ ವಲಯಕ್ಕಾಗಿ, ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ತೀರ್ಮಾನ
ಯೂರಿಯಾ ಪೂರೈಕೆಯನ್ನು ಇನ್ನಷ್ಟು ಹೆಚ್ಚಿಸಲು ಅಸ್ಸಾಂನಲ್ಲಿ ಯೂರಿಯಾ ಪ್ಲಾಂಟ್ ಸ್ಥಾಪನೆ. ವಾರ್ಷಿಕ 12.7 ಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯದ ಸ್ಥಾವರವನ್ನು ಅಸ್ಸಾಂನ ನಾಮ್ರೂಪ್ನಲ್ಲಿ ಸ್ಥಾಪನೆ; ಪೂರ್ವ ಪ್ರದೇಶದಲ್ಲಿ ನಿಷ್ಕ್ರಿಯವಾಗಿದ್ದ 3 ಯೂರಿಯಾ ಸ್ಥಾವರಗಳನ್ನು ಪುನಃ ತೆರೆಯಲು ನಿರ್ಧಾರ
ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬ್ರಾಡ್ಬ್ಯಾಂಡ್ ಸಂಪರ್ಕವನ್ನು ವಿಸ್ತರಣೆ
ಭಾರತದ ಪಾದರಕ್ಷೆ ಮತ್ತು ಚರ್ಮದ ವಲಯಕ್ಕೆ ಮೀಸಲಾದ ಯೋಜನೆ ಜಾರಿ; 22 ಲಕ್ಷ ವ್ಯಕ್ತಿಗಳಿಗೆ ಉದ್ಯೋಗವನ್ನು ಸೃಷ್ಟಿಸುವ ನಿರೀಕ್ಷೆಯಿದೆ, 4 ಲಕ್ಷ ಕೋಟಿ ರೂ. ಆದಾಯವನ್ನು ಸಾಧಿಸುತ್ತದೆ ಮತ್ತು ರಫ್ತುಗಳನ್ನು 1.1 ಲಕ್ಷ ಕೋಟಿಗೆ ರೂ.ಗೆ ಹೆಚ್ಚಿಸುತ್ತದೆ.
ಇಂಡಿಯಾ ಪೋಸ್ಟ್ ಅನ್ನು ಪ್ರಮುಖ ಸಾರ್ವಜನಿಕ ಲಾಜಿಸ್ಟಿಕ್ಸ್ ಸಂಸ್ಥೆಯಾಗಿ ಪರಿವರ್ತಿಸಲು ನಿರ್ಧಾರ.
ಬಿಹಾರಕ್ಕೆ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಮಂಜೂರು; ಪಟ್ನಾ ಐಐಟಿ ವಿಸ್ತರಣೆಗೆ ಅನುದಾನ ಘೋಷಣೆ. ವಿರೋಧ ಪಕ್ಷಗಳ ಇತರ ರಾಜ್ಯಗಳ ಸಂಸದರ ಆಕ್ರೋಶ.
ಉಡಾನ್ ಯೋಜನೆಗೆ ಹೆಚ್ಚಿನ ಉತ್ತೇಜನ. ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒತ್ತು; ಮುಂದಿನ ಹತ್ತು ವರ್ಷಗಳಲ್ಲಿ ಈಗಿರುವುದಕ್ಕಿಂತ 4 ಕೋಟಿ ಹೆಚ್ಚುವರಿ ಪ್ರಯಾಣಿಕರ ಗುರಿ.
ಗಿಗ್ ಕಾರ್ಮಿಕರಿಗೆ ಆರೋಗ್ಯ ವಿಮೆ ಸೌಲಭ್ಯ ವಿಸ್ತರಣೆ; 1 ಕೋಟಿ ಗರ್ಭಿಣಿಯರು ಹಾಗೂ ಹಾಲುಣಿಸುವ ತಾಯಂದರಿಗೆ ವಿಶೇಷ ಯೋಜನೆ
ಪಟ್ಟಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ₹1ಲಕ್ಷ ಕೋಟಿ ಮೀಸಲು. ಇದು ಕುಡಿಯುವ ನೀರು, ನೈರ್ಮಲ್ಯಕ್ಕೆ ಒತ್ತು ನೀಡಲು ವಿನಿಯೋಗ