ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಜಮೀನು ಕಬಳಿಕೆ ಆರೋಪ; ಎಸ್‌ ಐಟಿ ತನಿಖೆಗೆ ಹೈಕೋರ್ಟ್‌ ತಡೆ

Most read

ಬೆಂಗಳೂರು: ರಾಮನಗರ ತಾಲ್ಲೂಕು ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು  ಸರ್ಕಾರಿ ಜಮೀನು ಒತ್ತುವರಿ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ ಐಟಿ) ರಚಿಸಿರುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಎಸ್‌ಐಟಿ ನೇಮಕ ರದ್ದುಪಡಿಸುವಂತೆ ಕೋರಿ ಕುಮಾರಸ್ವಾಮಿ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ವಿಚಾರಣೆ ನಡೆಸಿತು.

ಕುಮಾರಸ್ವಾಮಿ ಅವರ ಮೇಲಿನ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜಮೀನಿನ ಮಾಲೀಕತ್ವ ಕುರಿತು ತನಿಖೆ ನಡೆಸಲು ಸರ್ಕಾರ ವಿಶೇಷ ತನಿಖಾ ತಂಡ ರಚಿಇತ್ತು.

ಕುಮಾರಸ್ವಾಮಿ ಪರವಾಗಿ ಹಿರಿಯ ವಕೀಲ ಉದಯ ಹೊಳ್ಳ ಅವರು ವಾದಿಸಿದರು. ಇವರ ವಾದವನ್ನುಒಪ್ಪಿಕೊಂಡ ನ್ಯಾಯಪೀಠ ಎಸ್‌ ಐಟಿ ನೇಮಕ ಆದೇಶಕ್ಕೆ ಮುಂದಿನ ವಿಚಾರಣೆವರೆಗೆ ಮಧ್ಯಂತರ ತಡೆ ನೀಡಿತು. ಸರ್ಕಾರದ ಪರ ವಕೀಲರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು.

ರಾಮನಗರ ತಾಲ್ಲೂಕು ಬಿಡದಿ ಹೋಬಳಿಯ ಕೇತಗಾನಗಳ್ಳಿಯ ವಿವಿಧ ಸರ್ವೇ ನಂಬರ್ ಗಳಲ್ಲಿ ಸುಮಾರು 14 ಎಕರೆ ಸರ್ಕಾರಿ ಜಮೀನಿನ ಮಾಲೀಕತ್ವ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ 2025ರ ಜನವರಿ 28ರಂದು ಎಸ್‌ಐಟಿ ರಚಿಸಿ ಆದೇಶಿಸಲಾಗಿತ್ತು.

More articles

Latest article