ಕೇಂದ್ರ ಸಚಿವ ಎಲ್. ಮುರುಗನ್ ರಾಜೀನಾಮೆ : ತಮಿಳುನಾಡಿನಲ್ಲಿ ಬಿಜೆಪಿಯನ್ನು ಬಲಪಡಿಸಲು ಈ ನಿರ್ಧಾರ ಎಂದ ಸಚಿವ

ನವದೆಹಲಿ, ಅ. 13: ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಎಲ್. ಮುರುಗನ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ರಾಜ್ಯಸಭಾ ಸದಸ್ಯತ್ವವನ್ನೂ ತ್ಯಜಿಸಲು ನಿರ್ಧರಿಸಿದ್ದಾರೆ. 2029ರ ಲೋಕಸಭಾ ಚುನಾವಣೆಗೆ ಮುನ್ನ ತಮಿಳುನಾಡಿನಲ್ಲಿ ಬಿಜೆಪಿಯನ್ನು ಬಲಪಡಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಮುರುಗನ್, ತಮ್ಮನ್ನು ಸಚಿವ ಜವಾಬ್ದಾರಿಯಿಂದ ಬಿಡುಗಡೆಗೊಳಿಸುವಂತೆ ಹಾಗೂ ರಾಜ್ಯಸಭಾ ಸದಸ್ಯತ್ವವನ್ನು ತ್ಯಜಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರದಲ್ಲಿ ಮುಂದುವರಿಯುವುದಕ್ಕಿಂತ ತಮಿಳುನಾಡಿನಲ್ಲಿ ಪಕ್ಷ ಸಂಘಟನೆಗೆ ಪೂರ್ಣ ಸಮಯ ಮೀಸಲಿಡುವುದು ತಮ್ಮ ಉದ್ದೇಶ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.

ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಆದ್ಯತೆ

ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ದೇಶದ ಮತ್ತು ತಮಿಳುನಾಡಿನ ಸೇವೆ ಸಲ್ಲಿಸಲು ಅವಕಾಶ ದೊರೆತಿರುವುದು ತಮ್ಮ ಜೀವನದ ಅತ್ಯಂತ ದೊಡ್ಡ ಗೌರವ ಎಂದು ಮುರುಗನ್ ಹೇಳಿದ್ದಾರೆ. ದಿನಗೂಲಿ ಕಾರ್ಮಿಕರ ಕುಟುಂಬದಿಂದ ಬಂದ ತಮಗೆ ಕೇಂದ್ರ ಸಚಿವ ಸಂಪುಟದಲ್ಲಿ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿರುವುದು ಹೆಮ್ಮೆಯ ಸಂಗತಿ ಎಂದೂ ಅವರು ತಿಳಿಸಿದ್ದಾರೆ.

ಇನ್ನು ಮುಂದೆ ತಮಿಳುನಾಡಿನ ಬಿಜೆಪಿ ಕಾರ್ಯಕರ್ತರೊಂದಿಗೆ ನೇರವಾಗಿ ಕೆಲಸ ಮಾಡುವುದು, ಪಕ್ಷದ ಸಂಘಟನೆಯನ್ನು ಬಲಪಡಿಸುವುದು ಮತ್ತು ಪ್ರಧಾನಿ ಮೋದಿ ಅವರ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್’ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವುದಕ್ಕೆ ತಮ್ಮನ್ನು ತೊಡಗಿಸಿಕೊಳ್ಳುವುದಾಗಿ ಹೇಳಿದ್ದಾರೆ.

2029ರ ಲೋಕಸಭಾ ಚುನಾವಣೆ ಮೇಲೆ ಗಮನ

ತಮಿಳುನಾಡಿನಲ್ಲಿ ಬಿಜೆಪಿ ತನ್ನ ರಾಜಕೀಯ ನೆಲೆಯನ್ನು ವಿಸ್ತರಿಸಲು ಪ್ರಯತ್ನಿಸುತ್ತಿರುವ ಸಂದರ್ಭದಲ್ಲಿ ಮುರುಗನ್ ಅವರ ನಿರ್ಧಾರ ಮಹತ್ವ ಪಡೆದಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ನೀಲಗಿರಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಡಿಎಂಕೆ ಅಭ್ಯರ್ಥಿ ಎ. ರಾಜಾ ವಿರುದ್ಧ ಸೋಲು ಅನುಭವಿಸಿದ್ದರು. ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಲು ಅವರು ಮುಂದಾಗಿದ್ದಾರೆ.

More articles

Latest article

Most read