ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಗಂಭೀರ ಆರೋಪ ಕೇಳಿ ಬಂದ ಬೆನ್ನಲ್ಲೇ ಗೋಪಾಲ್ ಜೋಶಿ ಅವರನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ. ಇದರ ಜೊತೆಗೆ ಪುತ್ರ ಅಜಯ್ ಜೋಷಿ ಅನ್ನುಇ ಬಂದಿಸಿದ್ದಾರೆ.
ಗೋಪಾಲ್ ಜೋಶಿ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದರು. ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಲಾಡ್ಜ್ನಲ್ಲಿ ಉಳಿದುಕೊಂಡಿದ್ದ ಅವರನ್ನು ಇಂದು ಬೆಳಗ್ಗೆ 5.30ಕ್ಕೆ ಲಾಡ್ಜ್ ಗೆ ತೆರಳಿ ಪೊಲೀಸರು ಬಂಧಿಸಿದ್ದಾರೆ. ಇನ್ನು ಅವರ ಪುತ್ರ ಅಜಯ್ ಜೋಷಿ ಅವರನ್ನು ಪುಣೆಯಲ್ಲಿ ಬಂಧಿಸಿ, ಇಬ್ಬರನ್ನು ಹುಬ್ಬಳ್ಳಿಗೆ ಕರೆದೊಯ್ದಿದ್ದಾರೆ.