ನಮ್ಮಲ್ಲೂ ಉತ್ತರ ಪ್ರದೇಶ ಮಾದರಿ ಕಾನೂನು ತರಲಿ. ಪಾಕಿಸ್ತಾನವನ್ನು ಯಾರಾದರೂ ಬೆಂಬಲಿಸಿದರೆ ಅವರನ್ನು ಗುಂಡಿಕ್ಕಿ ಕೊಲ್ಲಲಿ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ರಾಜ್ಯದಲ್ಲಿ ಉತ್ತರ ಪ್ರದೇಶದ ಮಾದರಿ ಕಾನೂನು ಸುವ್ಯವಸ್ಥೆ ಜಾರಿಯಾಗಬೇಕು ಎಂದು ಸಲಹೆ ನೀಡಿದರು. ಉತ್ತರ ಪ್ರದೇಶದಲ್ಲಿ ಗಲಭೆ ಪ್ರಕರಣಗಳಲ್ಲಿ ಆರೋಪಿಗಳ ಮನೆಗಳು ಮತ್ತು ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ, ಆದರೆ, ಹಾಗೆ ಮಾಡಲು ಕಾನೂನು ಅನುಮತಿ ಇಲ್ಲ. ಆದರೆ, ಕಾಯ್ದೆಯು ಯುಪಿಯಲ್ಲಿ ಗಲಭೆ ಮತ್ತು ಇತರ ಸಮಾಜ ವಿರೋಧಿ ಚಟುವಟಿಕೆಗಳನ್ನು ತಡೆಯಲು ಸಹಾಯ ಮಾಡಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಸಿಎಂ ಯೋಗಿ ಆದಿತ್ಯನಾಥ್ ಕ್ರಮವನ್ನು ಶ್ಲಾಸಿದರು.
ಸಮಾಜ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕರ್ನಾಟಕ ಪೊಲೀಸರು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಾರೆಂಬ ವಿಶ್ವಾಸವಿದೆ. ವಿವಿಧ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ಸಮಾಜದಲ್ಲಿ ಶಾಂತಿ ನೆಲೆಸಬೇಕು. ಒಂದು ವೇಳೆ ಇಲ್ಲಿ ತೊಂದರೆಯಾದರೆ ಇದು ರಾಜ್ಯದ ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತದೆ ಎಂದರು.