Tuesday, December 10, 2024

ಸಂಸತ್‌ ನಲ್ಲಿ ಗದ್ದಲ. ಕಲಾಪ ನಾಳೆಗೆ ಮುಂದೂಡಿಕೆ

Most read

ನವದೆಹಲಿ: ಗೌತಮ್ ಅದಾನಿ ಲಂಚ ಹಗರಣ, ಉತ್ತರ ಪ್ರದೇಶದ ಸಂಭಾಲ್‌ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರ ಮತ್ತು ಇತರ ಪ್ರಕರಣಗಳನ್ನು ಕುರಿತು ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆಯ ನಡುವೆ ಸಂಸತ್ತಿನ ಉಭಯ ಸದನಗಳ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.

ಇಂದು ಅಧಿವೇಶನದ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ಮತ್ತು ವಿವಿಧ ವಿಷಯಗಳನ್ನು ಪ್ರಸ್ತಾಪಿಸಲು ಪ್ರಯತ್ನಿಸಿದರು. ಸದನ ನಿಯಂತ್ರಣಕ್ಕೆ ಬಾರದ ಕಾರಣ ಲೋಕಸಭೆಯ ಕಲಾಪವನ್ನು ಆರಂಭದಲ್ಲಿ ಮಧ್ಯಾಹ್ನ 12 ರವರೆಗೆ ಮುಂದೂಡಲಾಯಿತು. ನಂತರವೂ ಪ್ರತಿಪಕ್ಷಗಳು ಕೆಲವು ವಿಷಯಗಳನ್ನು ಪ್ರಸ್ತಾಪಿಸಲು ಅನುಮತಿ ನೀಡಬೇಕೆಂದು ಪಟ್ಟು ಹಿಡಿದವು. ಇದರಿಂದ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು.

 ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಕೆಲವು ಸದಸ್ಯರು ಬಾವಿಗಿಳಿದರೆ ಇತರ ವಿರೋಧ ಪಕ್ಷದ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಪಕ್ಷದ ಸದಸ್ಯರು ಅದಾನಿ ವಿವಾದ ಮತ್ತು ಸಂಭಾಲ್‌ನಲ್ಲಿ ಇತ್ತೀಚಿನ ಹಿಂಸಾಚಾರ ಕುರಿತು ಚರ್ಚಿಸಲು ಅವಕಾಶ ಕೋರಿದರು. ಸ್ಪೀಕರ್ ಓಂ ಬಿರ್ಲಾ ಅವರು ಪ್ರಶ್ನೋತ್ತರ ಅವಧಿ ನಂತರ ಅವಕಾಶ ನೀಡುವಾಗಿ ಭರವಸೆ ನೀಡಿದರು. ಗದ್ದಲದ ನಡುವೆಯೇ ಪ್ರಶ್ನೋತ್ತರಕ್ಕೆ ಅವಕಾಶ ನೀಡಲಾಯಿತು. ಆದರೆ ಪ್ರತಿಭಟನೆ ಮುಂದುವರಿದಿದ್ದರಿಂದ  ಉಭಯ ಸದನಗಳ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.

More articles

Latest article