ಉತ್ತರ ಪ್ರದೇಶ: ಹಳಿತಪ್ಪಿದ ಚಂಡೀಗಢ – ದಿಬ್ರುಗಢ ಎಕ್ಸ್‌ಪ್ರೆಸ್‌ ರೈಲು, ಇಬ್ಬರ ಸಾವು, 25ಕ್ಕೂ ಹೆಚ್ಚು ಜನರಿಗೆ ಗಾಯ!

ಉತ್ತರ ಪ್ರದೇಶದ ಗೊಂಡಾದಲ್ಲಿ ಚಂಡೀಗಢ ದಿಬ್ರುಗಢ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಹಳಿತಪ್ಪಿದ್ದು, ಈ ಘಟನೆಯಿಂದಾಗಿ ಇಬ್ಬರು ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

15 ಬೋಗಿಗಳ ಪೈಕಿ ಎಸಿ ಕಂಪಾರ್ಟ್‌ಮೆಂಟ್‌ನ ನಾಲ್ಕು ಬೋಗಿಗಳು ಜುಲಾಹಿ ರೈಲ್ವೇ ನಿಲ್ದಾಣದ ಕೆಲವು ಕಿಲೋಮೀಟರ್‌ಗಳಿಗೂ ಮೊದಲು ಹಳಿತಪ್ಪಿದವು.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ರೈಲು ಚಂಡೀಗಢದಿಂದ ಅಸ್ಸಾಂನ ದಿಬ್ರುಗಢಕ್ಕೆ ಬರುತ್ತಿತ್ತು. ಜಿಲಾಹಿ ರೈಲು ನಿಲ್ದಾಣ ಮತ್ತು ಗೋಸಾಯಿ ದಿಹ್ವಾ ನಡುವೆ ಈ ಅಪಘಾತ ಸಂಭವಿಸಿದೆ.

More articles

Latest article

Most read