ಸಂಭಲ್: ಉತ್ತರ ಪ್ರದೇಶದ ಸಂಭಲ್‌ನ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವಿರೋಧಿಸಿ ಪ್ರತಿಭಟನಕಾರರು ನಡೆಸಿದ ಹಿಂಸಾಚಾರದಲ್ಲಿ ಮೂವರು ಮೃತಪಟ್ಟಿದ್ದು, ಭದ್ರತಾ ಸಿಬ್ಬಂದಿ ಸೇರಿ ಹಲವಾರು ಮಂದಿ ಗಾಯಗೊಂಡಿದ್ದಾರೆ. ಆದ್ದರಿಂದ ಜಿಲ್ಲಾಡಳಿತ ನಿಷೇಧಾಜ್ಞೆ ವಿಧಿಸಿಸದೆ. ನವಂಬರ್ .30ರವರೆಗೆ ಜಿಲ್ಲೆಯ ಹೊರಗಿನ ಜನರ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಲಾಗಿದೆ. ಕೂಡಲೇ ಜಾರಿಯಾಗುವಂತೆ, ಸಕ್ಷಮ ಅಧಿಕಾರಿಯ ಅನುಮತಿಯಿಲ್ಲದೆ ಹೊರಗಿನವರು, ಇತರ ಸಾಮಾಜಿಕ ಸಂಘಟನೆಗಳು ಅಥವಾ ಜನಪ್ರತಿನಿಧಿಗಳು ಜಿಲ್ಲೆಯ ಗಡಿಯನ್ನು ಪ್ರವೇಶಿಸುವಂತಿಲ್ಲ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.
ಜಾಮಾ ಮಸೀದಿಯಿದ್ದ ಜಾಗದಲ್ಲಿ ಪುರಾತನ ಹಿಂದೂ ದೇವಾಲಯವಿತ್ತು, ಮೊಘಲ್ ದೊರೆ ಬಾಬರ್ ಆಳ್ವಿಕೆ ಅವಧಿಯಲ್ಲಿ ದೇಗುಲ ಕೆಡವಿ ಮಸೀದಿ ಕಟ್ಟಲಾಗಿದೆ. ದೇಗುಲಕ್ಕೆ ಸೇರಿದ ಅನೇಕ ಗುರುತುಗಳೂ ಅಲ್ಲಿವೆ ಎಂದು ಸುಪ್ರೀಂ ಕೋರ್ಟ್ ವಕೀಲ ವಿಷ್ಣು ಶಂಕರ್ ಜೈನ್ ಅವರು ಸ್ಥಳೀಯ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ವಿಡಿಯೊ ಚಿತ್ರೀಕರಣ ಮತ್ತು ಛಾಯಾಗ್ರಹಣ ಸಹಿತ ಸಮೀಕ್ಷೆ ನಡೆಸಿ, ವರದಿ ಸಲ್ಲಿಸುವಂತೆ ಆದೇಶಿಸಿತ್ತು.
ಸಮೀಖಷೆಯು ಶಾಂತಿಯುತವಾಗಿ ನಡೆಯುತ್ತಿದ್ದು, ಮಸೀದಿ ಸಮೀಪ ಜಮಾಯಿಸಿದ್ದ ಜನರು ಘೋಷಣೆಗಳನ್ನು ಕೂಗಲು ಆರಂಭಿಸಿದ್ದರು. ಇವರನ್ನು ಚದುರಿಸಲು ಪೊಲೀಸರು ಮುಂದಾದಾಗ ದುಷ್ಕರ್ಮಿಗಳ ಗುಂಪೊಂದು ಕಲ್ಲು ತೂರಾಟ ಆರಂಭಿಸಿದೆ. ದುಷ್ಕರ್ಮಿಗಳು ಮತ್ತು ಪೊಲೀಸರ ನಡುವೆ ಕಲ್ಲು ಘರ್ಷಣೆ ಆರಂಭವಾಗಿ ಹಿಂಸಾಚಾರಕ್ಕೆ ತಿರುಇತು ಎಂದು ಮೊರಾದಾಬಾದ್ ವಿಭಾಗೀಯ ಆಯುಕ್ತ ಆಂಜನೇಯಯ ಸಿಂಗ್ ತಿಳಿಸಿದ್ದಾರೆ.