ಉ.ಪ್ರ. ಮದರಸಾ ಕಾಯ್ದೆ: ಮಾಯಾವತಿ, ಸಮಾಜವಾದಿ ಪಕ್ಷ, ಶಿಯಾ ಮಂಡಲಿ ಪ್ರತಿಕ್ರಿಯೆಗಳೇನು?

Most read

ನವದೆಹಲಿ: ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ-2004ರ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿ ಹಿಡಿದಿರುವ ಸುಪ್ರೀಂಕೋರ್ಟ್, ಕಾಯ್ದೆಯು ಜಾತ್ಯತೀತ ತತ್ವವನ್ನು ಉಲ್ಲಂಘಿಸುವುದಿಲ್ಲ ಎಂದು ಮಂಗಳವಾರ ಮಹತ್ವದ ತೀರ್ಪು ನೀಡಿದೆ. ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ನ್ಯಾಯಪೀಠದಲ್ಲಿ ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಹಾಗೂ ಮನೋಜ್ ಮಿಶ್ರಾ ಅವರಿದ್ದ ಪೀಠ ಈ ತೀರ್ಪು ನೀಡಿದೆ. ಇದು ಜಾತ್ಯತೀತ ತತ್ವವನ್ನು ಉಲ್ಲಂಘಿಸುತ್ತದೆ. ಎಂಬ ಕಾರಣ ನೀಡಿ ಕಾಯ್ದೆಯನ್ನು ರದ್ದುಗೊಳಿಸಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.


ಯಾರು ಏನು ಹೇಳಿದ್ದಾರೆ?
ಮದರಸಾಗಳ ಭವಿಷ್ಯ ಕುರಿತು ಸೃಷ್ಟಿಯಾಗಿದ್ದ ಅನಿಶ್ಚಿತತೆಗೆ ಸುಪ್ರೀಂ ಕೋರ್ಟ್ ತೀರ್ಪು ಕೊನೆ ಹಾಡಿದೆ. ಸುಪ್ರೀಂ ಕೋರ್ಟ್ ತೀರ್ಪನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದು ಮುಖ್ಯ ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅಭಿಪ್ರಾಯಪಟ್ಟಿದ್ದಾರೆ.


ಸಮಾಜವಾದಿ ಪಕ್ಷದ ವಕ್ತಾರ ಫಖ್ರುಲ್ ಹಸನ್ ಪ್ರತಿಕ್ರಿಯಿಸಿ ಸ್ವಾತಂತ್ರ್ಯ ಬಂದ ನಂತರ ಕಾನೂನು ಪ್ರಕಾರವೇ ಮದರಸಾಗಳನ್ನು ಸ್ಥಾಪಿಸಲಾಗಿದೆ. ಆಡಳಿತಾರೂಢ ಬಿಜೆಪಿ ಸರ್ಕಾರ ಮದರಸಾಗಳನ್ನು ಸಂಶಯದಿಂದ ನೋಡುವುದು ಸರಿಯಲ್ಲ. ಮದರಸಾಗಳು ಅನೇಕ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ರೂಪಿಸಿವೆ. ಸುಪ್ರೀಂ ಕೋರ್ಟ್ ತೀರ್ಪು ಅಲ್ಪ ಸಂಖ್ಯಾತರ ವಿರುದ್ಧವಾಗಿದ್ದು, ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಹೇಳಿದ್ದಾರೆ.
ಸರ್ಕಾರಕ್ಕೆ ಮದರಸಾಗಳಲ್ಲಿ ಸುಧಾರಣೆ ತರಬೇಕು ಎಂಬ ಉದ್ದೇಶ ಇದ್ದಲ್ಲಿ ಅದು ಸಂಬಂಧಿಸಿದ ಭಾಗೀದಾರರೊಂದಿಗೆ ಚರ್ಚೆ ನಡೆಸಿ, ಕ್ರಮ ತೆಗೆದುಕೊಳ್ಳಲಿ. ಈ ತೀರ್ಪು ಸಂವಿಧಾನದ ಆಶಯವನ್ನು ರಕ್ಷಿಸಿದೆ. ಯಾವುದೇ ಅಸಾಂವಿಧಾನಿಕ ನಿರ್ಧಾರ ಕೈಗೊಂಡಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಜಮೀಯತ್ ಉಲೇಮಾ-ಎ-ಹಿಂದ್ನ ಕಾನೂನು ಸಲಹೆಗಾರ ಮೌಲಾನಾ ಕಬ್ ರಶಿದಿ ಹೇಳಿದ್ದಾರೆ.


ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮದರಸಾಗಳು ಮಹತ್ವದ ಪಾತ್ರ ವಹಿಸಿದ್ದವು. ಮದರಸಾಗಳನ್ನು ಸಂಶಯದಿಂದ ನೋಡುವುದು ಸರಿಯಲ್ಲ. ಇವು ಅನೇಕ ಐಎಎಸ್, ಐಪಿಎಸ್ ಅಧಿಕಾರಿಗಳು ಹಾಗೂ ಸಚಿವರನ್ನು ರೂಪಿಸಿವೆ. ‘ಸುಪ್ರೀಂ’ ತೀರ್ಪು ಕಾಯ್ದೆಯನ್ನು ಸಮರ್ಥಿಸಿದೆ ಎಂದು ಅಖಿಲ ಭಾರತ ಶಿಯಾ ವೈಯಕ್ತಿಕ ಕಾನೂನು ಮಂಡಳಿ ವಕ್ತಾರ ಮೌಲಾನಾ ಯಾಸೂಬ್ ಅಬ್ಬಾಸ್ ತಿಳಿಸಿದ್ದಾರೆ.

More articles

Latest article