ಬೆಂಗಳೂರು: ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ನೋಟೀಸ್ ನೀಡಿದೆ ಎಂದು ಹರಡಿರುವ ಸುದ್ದಿ ಸುಳ್ಳು ಎಂದು ಮುಖ್ಯಮಂತ್ರಿಗಳ ಕಚೇರಿ ಮೂಲಗಳು ತಿಳಿಸಿವೆ.
ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ಧರಾಮಯ್ಯ ಅವರಿಗೆ ಇಡಿ ನೋಟೀಸ್ ನೀಡಿದೆ ಎಂಬ ಸುದ್ದಿಗಳು ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದವು.
ಈ ಕುರಿತು ಮುಖ್ಯಮಂತ್ರಿಗಳ ಕಚೇರಿ ಸ್ಪಷ್ಟನೆ ನೀಡಿದ್ದು, ಇಡಿ ಯಾವುದೇ ನೋಟೀಸ್ ನೀಡಿಲ್ಲ ಎಂದು ತಿಳಿಸಿದೆ.