ನಟಿ ಕಂಗನಾಗೆ ಬಿಜೆಪಿಯಿಂದ ಲೋಕಸಭಾ ಟಿಕೆಟ್ : ಅಮ್ಮನಿಗೆ ಟಿಕೆಟ್ ಕೊಟ್ಟು ಮಗನಿಗೆ ಕೈ ಕೊಟ್ಟ ಬಿಜೆಪಿ!

ಬಿಜೆಪಿ ಲೋಕಸಭಾ ಚುನಾವಣೆಗೆ ಭಾನುವಾರ 111 ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ನಟಿ ಕಂಗನಾ ರಣಾವತ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.

ಉತ್ತರ ಪ್ರದೇಶದ ಪಿಲಿಭಿತ್‌ನಿಂದ ವರುಣ್ ಗಾಂಧಿಯನ್ನು ಕೈಬಿಟ್ಟು ಮಾಜಿ ಕಾಂಗ್ರೆಸ್ ನಾಯಕ ಜಿತಿನ್ ಪ್ರಸಾದ್ ಅವರಿಗೆ ಟಿಕೆಟ್ ನೀಡಿದೆ.

ವರುಣ್ ಅವರ ತಾಯಿ ಮಾಜಿ ಕೇಂದ್ರ ಸಚಿವೆ ಮೇನಕಾ ಗಾಂಧಿ ಅವರನ್ನು ಸುಲ್ತಾನ್‌ಪುರದಿಂದ ಕಣಕ್ಕಿಳಿಸುತ್ತಿದೆ.

ಕೋಲ್ಕತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಅಭಿಜಿತ್ ಗಂಗೂಲಿ ಅವರಿಗೆ ತಮ್ಲುಕ್‌ ಕ್ಷೇತ್ರಕ್ಕೆ ಟಿಕೆಟ್ ನೀಡಿದೆ.

More articles

Latest article

Most read