ವೀರಶೈವ ಲಿಂಗಾಯತ ಜಂಗಮರು ಬೇಡ ಅಥವಾ ಬುಡ್ಗ ಜಂಗಮರಲ್ಲ: ಹೈಕೋರ್ಟ್‌ ಮಹತ್ವದ ತೀರ್ಪು

ಬೆಂಗಳೂರು:  ವೀರಶೈವ ಲಿಂಗಾಯತ ಜಂಗಮರು ಬೇಡ ಅಥವಾ ಬುಡ್ಗ ಜಂಗಮರಲ್ಲ ಎಂದು ರಾಜ್ಯ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಕಲಬುರಗಿ ಪೀಠದಲ್ಲಿ ಸರ್ಕಾರ ಸಲ್ಲಿಸಿದ ಮೇಲ್ಮನವಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಹಾಗೂ ನ್ಯಾಯಮೂರ್ತಿ ರಾಮಚಂದ್ರ ಡಿ. ಹುದ್ದಾರ್ ಅವರಿದ್ದ ವಿಭಾಗೀಯ ಪೀಠ ಈ ಮಹತ್ವದ ಆದೇಶ ಹೊರಿಡಿಸಿದೆ.

ವೀರಶೈವ ಲಿಂಗಾಯತ ಜಂಗಮರು ಪರಿಶಿಷ್ಟ ಜಾತಿಯಲ್ಲಿ ತಮಗೂ ಪ್ರತ್ಯೇಕ ಒಳಮಿಸಲು ಬೇಕು ಎಂದು ಮುಂದಿಟ್ಟಿದ್ದ ಬೇಡಿಕೆಗೆ ಭಾರಿ ಹಿನ್ನಡೆಯಾಗಲಿದೆ. ಲಿಂಗಾಯಿತರಲ್ಲಿನ ಜಂಗಮರು ಸಮಾಜದ ಉನ್ನತ ವರ್ಗಕ್ಕೆ ಸೇರಿದ್ದು ಅವರು ಪೂಜ್ಯ ವರ್ಗ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿಗಳು ವೀರಶೈವರಲ್ಲಿನ ಜಂಗಮ ವರ್ಗದ ವೃತ್ತಾಂತ, ಬೇಡ ಮತ್ತು ಬುಡ್ಗ ಜಂಗಮರ ಇತಿಹಾಸವನ್ನು ತೀರ್ಪಿನಲ್ಲಿ  ಪ್ರಸ್ತಾಪಿಸಿದ್ದಾರೆ.  ಖ್ಯಾತ ಇತಿಹಾಸ ತಜ್ಞ ಬಿ.ಎಲ್. ರೈಸ್ ಮತ್ತು ಮಾನವಶಾಸ್ತ್ರಜ್ಞರ ದಾಖಲೆಗಳನ್ನು ಉಲ್ಲೇಖಿಸಿ ಲಿಂಗಾಯಿತರಲ್ಲಿನ ಜಂಗಮರೇ ಬೇರೆ, ಬುಡ್ಗ ಅಥವಾ ಬೇಡ ಜಂಗಮರೇ ಬೇರೆ ಎಂದು ಸ್ಪಷ್ಟಪಡಿಸಿದ್ದಾರೆ. ಇದರಿಂದ ನೈಜ ಬುಡ್ಗ ಅಥವಾ ಬೇಡ ಜಂಗಮರ ಹೋರಾಟಕ್ಕೆ ಈ ಮೂಲಕ ಫಲ ಸಂದಿದೆ.

More articles

Latest article

Most read