CNG ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ವಾಹನ ಅಪಘಾತ: ಇಬ್ಬರ ಸ್ಥಿತಿ ಗಂಭೀರ

Most read

ಚಿಕ್ಕಬಳ್ಳಾಪುರ: ಸಿಎನ್‌ಜಿ ಗ್ಯಾಸ್ ಸಿಲಿಂಡರ್ ಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಗ್ರಾನೈಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಉರಿದ ಘಟನೆ ಚಿಕ್ಕಬಳ್ಳಾಪುರ ಸಮೀಪದ ಹುನೇಗಲ್ ಗ್ರಾಮದ ಬಳಿ ಸಂಭವಿಸಿದೆ.
ಈ ಅಗ್ನಿ ಅವಘಡದಲ್ಲಿ ಚಾಲಕ ಕ್ಯಾಂಟರ್ ಚಾಲಕ ನರಸಿಂಹಮೂರ್ತಿ ಮತ್ತು ಮಾದಪ್ಪ ಎಂಬವರಿಗೆ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುನೇಗಲ್ ಬಳಿ ಯೂ ಟರ್ನ್ ಪಡೆಯಲು ನಿಂತಿದ್ದ ಸಿಎನ್ಜಿ ಸಿಲಿಂಡರ್ ತುಂಬಿದ್ದ ಲಾರಿಗೆ, ಕಲ್ಲು ಮತ್ತು ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸಿಎನ್ಜಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಇದರ ಪರಿಣಾಮ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದೆ.
ಈ ಘಟನೆಯಿಂದ ಹುನೇಗಲ್ ಗ್ರಾಮದ ನಾಗರೀಕರು ಆತಂಕಕ್ಕೀಡಾಗಿದ್ದು ತಮ್ಮ ಮನೆಗಳಿಗೆ ಬೆಂಕಿ ತಗುಲಬಹುದು ಎಂದು ಆತಂಕಕ್ಕೀಡಾಗಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಆಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಪೊಲೀಸರು ಆಗಮಿಸಿದ್ದು, ಕ್ರೇನ್ ಮೂಲಕ ವಾಹನ ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.

More articles

Latest article