ಹಿರಿಯ ಪತ್ರಕರ್ತ ಅರ್ಜುನ ದೇವ ಇನ್ನಿಲ್ಲ

Most read

ಬೆಂಗಳೂರು: ಹಿರಿಯ ಪತ್ರಕರ್ತ, ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಅರ್ಜುನ ದೇವ (92 ) ಇಂದು ನಿಧನರಾಗಿದ್ದಾರೆ.

ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರು ಎಳೆದಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಅವರು ಅಗಲಿದ್ದಾರೆ.

ತಾಯಿನಾಡು, ಸಂಯುಕ್ತ ಕರ್ನಾಟಕ, ಪ್ರಜಾವಾಣಿ ಪತ್ರಿಕೆಗಳಲ್ಲಿ ತಮ್ಮ ಬಹುಪಾಲು ವೃತ್ತಿ ಜೀವನವನ್ನು ನಡೆಸಿದ ಅರ್ಜುನ ದೇವ ಸೂರ್ಯೋದಯ ಎಂಬ ಪತ್ರಿಕೆ ಸಂಪಾದಕರಾಗಿಯೂ ಕಾರ್ಯ ನಿರ್ವಹಿಸಿದ್ದರು.

ಅರ್ಜುನ ದೇವ ಅವರ ಅಂತ್ಯಕ್ರಿಯೆ ಅವರ ಹುಟ್ಟೂರಾದ ಕೋಲಾರದ ಚೌಡದೇವನಹಳ್ಳಿಯಲ್ಲಿ ಇಂದು ಸಂಜೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ, ಹಿರಿಯ ಪತ್ರಕರ್ತರು ಅರ್ಜುನ ದೇವ ಅವರನ್ನು ನೆನಪಿಸಿಕೊಂಡು ಕಂಬನಿಗರೆದಿದ್ದಾರೆ.

More articles

Latest article