ಹಿರಿಯ ರಂಗಕರ್ಮಿ ಚಿದಂಬರ ರಾವ್ ಜಂಬೆ‌ ನಿಧನ

ಶಿವಮೊಗ್ಗ : ಖ್ಯಾತ ರಂಗ ನಿರ್ದೇಶಕ ಚಿದಂಬರರಾವ್ ಜಂಬೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹೆಗ್ಗೋಡು ಗ್ರಾಮದ ಸ್ವಗೃಹದಲ್ಲಿ ಶನಿವಾರ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು. ಅವರಿಗೆ ಪತ್ನಿ, ಪುತ್ರ ಇದ್ದಾರೆ.

ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯಿಂದ ಪದವಿ ಪಡೆದಿದ್ದ ಅಲ್ಲಿಯೇ ಪ್ರಾಧ್ಯಾಪಕರಾಗಿದ್ದರು. ಹೆಗ್ಗೋಡಿನ ನೀನಾಸಂನ ರಂಗ ಶಿಕ್ಷಣ ಕೇಂದ್ರ, ಸಾಣೇಹಳ್ಳಿಯ ರಂಗಶಿಕ್ಷಣ ಕೇಂದ್ರದ ಪ್ರಾಂಶುಪಾಲರಾಗಿದ್ದ ಅವರು ಮೈಸೂರು ರಂಗಾಯಣದ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು.

ದೇಶದ ಹಲವು ಪ್ರಖ್ಯಾತ ರಂಗತಂಡಗಳಿಗೆ ನಾಟಕಗಳನ್ನು ನಿರ್ದೇಶಿಸಿದ್ದ ಅವರಿಗೆ ರಂಗಭೂಮಿಯಲ್ಲಿ ದೇಶದ ಎಲ್ಲೆಡೆ ಶಿಷ್ಯರಿದ್ದಾರೆ.
ಕತ್ತಲೆಗೆ ಹತ್ತು ತಲೆ, ಲೋಕ ಶಾಕುಂತಲ, ತ್ರಿವಳಿ ಸಹೋದರಿಯರು, ಆ ಮನಿ ನಾಟಕಗಳಲ್ಲದೆ ಉಮಾಶ್ರೀ ಅವರಿಗಾಗಿ ಶರ್ಮಿಷ್ಠೆ ಏಕವ್ಯಕ್ತಿ
ನಾಟಕ ನಿರ್ದೇಶಿಸಿದ್ದರು.

ಶಿವಮೊಗ್ಗ ರಂಗಾಯಣಕ್ಕೆ ನಮ್ಮೊಳಗೊಬ್ಬ ಗಾಂಧಿ ನಾಟಕ ನಿರ್ದೇಶಿಸಿದ್ದರು. ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಅವರಿಗೆ ಸಂದಿವೆ. ಅವರ ಅಂತ್ಯಕ್ರಿಯೆ ಭಾನುವಾರ ಬೆಳಿಗ್ಗೆ 11ಕ್ಕೆ ಸಾಗರ ತಾಲ್ಲೂಕಿನ ‌ಅಡ್ಡೇರಿ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

More articles

Latest article

Most read