ಶನಿವಾರ ಏಳು ರಾಜ್ಯಗಳಲ್ಲಿ ನಡೆದ 13 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ಪೂರ್ಣಗೊಂಡಿದ್ದು, ಇಂಡಿಯಾ ಬಣ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನಿಂದ ಬಿಜೆಪಿ ತೀರ್ವ ಮುಖಭಂಗ ಎದುರಿಸಿದೆ.
13 ವಿಧಾನಸಭಾ ಉಪಚುನಾವಣೆ ಪೈಕಿ ಇಂಡಿಯಾ ಬಣ 10 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿ ನೇತೃತ್ವದ ಎನ್ಡಿಎಗೆ ಭಾರೀ ಹಿನ್ನಡೆ ಉಂಟಾಗಿದ್ದು, ಕೇವಲ 2 ಸ್ಥಾನಗಳಲ್ಲಿ ಮಾತ್ರ ಗೆಲುವು ಕಂಡಿದೆ. ಓರ್ವ ಸ್ವತಂತ್ರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಕೇಂದ್ರ ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿ 13 ಸ್ಥಾನಗಳ ಫಲಿತಾಂಶ ಪ್ರಕಟಿಸಲಾಗಿದ್ದು, ಅದರಲ್ಲಿ ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ (TMC) ತಲಾ 4, ಆಮ್ ಆದ್ಮಿ ಪಕ್ಷ (AAP) ಮತ್ತು ದ್ರಾವಿಡ ಮುನ್ನೇತ್ರ ಕಜಗಂ (DMK) ತಲಾ 1 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ 2, ಓರ್ವ ಸ್ವತಂತ್ರ ಅಭ್ಯರ್ಥಿ ಜಯ ಕಂಡಿದ್ದಾರೆ.
ಬಿಹಾರನ ರುಪೌಲಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾದ ಶಂಕರ್ ಸಿಂಗ್ ಗೆದ್ದರೆ, ಪಂಜಾಬ್‌ನ ಜಲಂಧರ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ರಾಜ್ಯದ ಆಡಳಿತಾರೂಢ ಎಎಪಿ ಗೆದ್ದುಕೊಂಡಿದೆ. ತಮಿಳುನಾಡಿನ ವಿಕ್ರವಾಂಡಿ ವಿಧಾನಸಭಾ ಕ್ಷೇತ್ರದಲ್ಲಿ ದ್ರಾವಿಡ ಮುನ್ನೇತ್ರ ಕಜಗಂ (ಡಿಎಂಕೆ) ಪಕ್ಷದ ಅಣ್ಣಿಯುರ್ ಶಿವ ಗೆಲುವು ಸಾಧಿಸಿದ್ದಾರೆ.
ಹಿಮಾಚಲಪ್ರದೇಶದಮೂರು ಸ್ಥಾನಗಳ ಪೈಕಿ 1 ರಲ್ಲಿ ಬಿಜೆಪಿ, 2 ಸ್ಥಾನಗಳಲ್ಲಿ ಕಾಂಗ್ರೆಸ್ ಜಯ ಸಾಧಿಸಿವೆ. ಒಂದು ಸ್ಥಾನ ಬಿಜೆಪಿ ಗೆಲುವು ಸಾಧಿಸಿದೆ. ಮಧ್ಯಪ್ರದೇಶದಅಮರ್ವಾರ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯದ ಖಾತೆ ತೆರೆದಿದೆ. ಪಶ್ಚಿಮಬಂಗಾಳದನಾಲ್ಕೂ ಕ್ಷೇತ್ರಗಳನ್ನು ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಭರ್ಜರಿ ಜಯ ಕಂಡಿದೆ.