ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷಿ ಹೇಳಲು ಹೊರಟಿದ್ದ ಮಹಿಳಾ ಕುಸ್ತಿಪಟುಗಳ ಭದ್ರತೆಯನ್ನು ದೆಹಲಿ ಪೊಲೀಸರು ಹಿಂಪಡೆದಿದ್ದಾರೆ ಎಂದು ವಿನೇಶ್ ಫೋಗಟ್ ಆರೋಪಿಸಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.
ಭದ್ರತೆಯನ್ನು ಹಿಂತೆಗೆದುಕೊಂಡಿರುದರಿಂದ ಕುಸ್ತಿಪಟುಗಳು ಸುರಕ್ಷಿತವಾಗಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಸಾಕ್ಷ್ಯಗಳನ್ನು ನೀಡುವ ಅವರ ಸಾಮರ್ಥ್ಯದ ಮೇಲೆ ಪ್ರಭಾವ ಬೀರಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಆದರೆ ವಿನೇಶ್ ಅವರ ಈ ಆರೋಪವನ್ನು ದೆಹಲಿ ಪೊಲೀಸರು ಅಲ್ಲಗಳೆದಿದ್ದಾರೆ.
ಕುಸ್ತಿ ಪಟ್ಟುಗಳು ಭದ್ರತೆಗಾಗಿ ದೆಹಲಿ ನ್ಯಾಯಾಲಯ ಸಂಪರ್ಕಿಸಿದ್ದರು. ಬಳಿಕ ಕೋರ್ಟ್ ತಕ್ಷಣವೇ ಭದ್ರತಾ ಕವಚ ಮರುಸ್ಥಾಪಿಸುವಂತೆ ನಗರ ಪೊಲೀಸರಿಗೆ ಸೂಚಿಸಿತ್ತು. ಬಳಿಕ ಪ್ರತಿಕ್ರಿಯಿಸಿದ ದೆಹಲಿ ಪೊಲೀಸರು, ಕುಸ್ತಿಪಟುಗಳಿಗೆ ಒದಗಿಸಲಾದ ಭದ್ರತೆಯನ್ನು ಹಿಂತೆಗೆದುಕೊಂಡಿಲ್ಲ ಎಂದು ಹೇಳಿದೆ.
ಇದಲ್ಲದೇ, ಭವಿಷ್ಯದಲ್ಲಿ ಜವಾಬ್ದಾರಿ ವಹಿಸಿಕೊಳ್ಳುವಂತೆ ಹರಿಯಾಣ ಪೊಲೀಸರಿಗೆ ವಿನಂತಿಸಲು ನಿರ್ಧರಿಸಲಾಗಿದೆ. ಆದ್ರೆ ನಿಯೋಜಿತ ದೆಹಲಿ ಪೊಲೀಸ್ ಪಿಎಸ್‌ಒಗಳು ಈ ನಿರ್ಧಾರವನ್ನು ತಪ್ಪಾಗಿ ಅರ್ಥಮಾಡಿಕೊಂಡಿದ್ದಾರೆ. ಈ ಕಾರಣದಿಂದಾಗಿ ಗುರುವಾರ ವರದಿ ಮಾಡಲು ತಡಮಾಡಿದ್ದಾರೆ, ಗೊಂದಲವನ್ನು ಸರಿಪಡಿಸಿದ್ದೇವೆ ಎಂದು ತಿಳಿಸಿದರು.