ಟೆಸ್ಟ್ ಕ್ರಿಕೆಟ್ ಗೆ ವಿರಾಟ್ ಕೊಹ್ಲಿ ವಿದಾಯ

Most read

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಇನ್ ಸ್ಟಾಗ್ರಾಮ್ನಲ್ಲಿ ನಿವೃತ್ತಿ ಕುರಿತು ಪೋಸ್ಟ್ ಹಂಚಿಕೊಂಡಿರುವ ಕೊಹ್ಲಿ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಇದರೊಂದಿಗೆ ಕಿಂಗ್ ಕೊಹ್ಲಿಯ 14 ವರ್ಷದ ಟೆಸ್ಟ್ ಕೆರಿಯರ್ ಅಂತ್ಯಗೊಂಡಂತಾಗಿದೆ.

ವಿರಾಟ್ ಕೊಹ್ಲಿ 2011 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. 14 ವರ್ಷಗಳ ವೃತ್ತಿಯಲ್ಲಿ, ಅವರು 123 ಟೆಸ್ಟ್ ಪಂದ್ಯಗಳಲ್ಲಿ 9,230 ರನ್‌ಗಳನ್ನು ಗಳಿಸಿದ್ದಾರೆ, ಸರಾಸರಿ 46.85. 30 ಶತಕಗಳು ಮತ್ತು 31 ಅರ್ಧಶತಕಗಳೊಂದಿಗೆ, ಕೊಹ್ಲಿ ಭಾರತದ ನಾಲ್ಕನೇ ಅತಿ ಹೆಚ್ಚು ರನ್ ಗಳಿಸಿದ ಟೆಸ್ಟ್ ಆಟಗಾರರಾಗಿದ್ದಾರೆ. 2020ರ ವರೆಗೆ ವಿಶ್ವ ಕ್ರಿಕೆಟ್‌ ನಲ್ಲಿ ತನ್ನ ಬ್ಯಾಟಿಂಗ್‌ನಿಂದ ಕ್ರಿಕೆಟ್ ಆಟದಲ್ಲಿ ರಾಜನಂತೆ ಮೆರದಿದ್ದ ಕೊಹ್ಲಿ ಆ ಬಳಿಕ ಫಾರ್ಮ್ ಕಳೆದುಕೊಳ್ಳುತ್ತಾ ಬಂದಿದ್ದರು. ವಿರಾಟ್ ಕೊಹ್ಲಿ 2020 ರವರೆಗೆ 27 ಟೆಸ್ಟ್ ಶತಕಗಳೊಂದಿಗೆ ಫ್ಯಾಬ್-4 ನಲ್ಲಿ ಅಗ್ರಸ್ಥಾನದಲ್ಲಿದ್ದರು.

More articles

Latest article