ವಿರಾಟ್ ಕೊಹ್ಲಿಯ ಬೆಂಗಳೂರಿನ  ‘ಒನ್ 8 ಕಮ್ಯೂನ್’ ಪಬ್ ವಿರುದ್ಧ ಎಫ್ ಐ ಆರ್

Most read

ಬೆಂಗಳೂರು: ಧೂಮಪಾನಕ್ಕೆ ಅವಕಾಶ ನೀಡಿ, ನಿಯಮ ಉಲ್ಲಂಘನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ದೇಶದ ಖ್ಯಾತ ಕ್ರಿಕೆಟ್‌ ಆಟಗಾರ ವಿರಾಟ್ ಕೊಹ್ಲಿ ಮಾಲೀಕತ್ವದ ‘ಒನ್ 8 ಕಮ್ಯೂನ್’ ಪಬ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 29ರಂದು ಕಬ್ಬನ್ ಪಾರ್ಕ್ ಪೊಲೀಸರು ಪಬ್ ಮೇಲೆ ದಾಳಿ ಮಾಡಿ, ಸ್ವಯಂಪ್ರೇರಿತವಾಗಿ ಎನ್‌ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ನ್ಯಾಯಾಲಯದ ಅನುಮತಿ ಪಡೆದು, ಕೊಟ್ಪಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

2024ರ ಜುಲೈನಲ್ಲೂ ಇದೇ ಬಾರ್ ಮೇಲೆ ಅವಧಿ ಮೀರಿ ಪಬ್ ನಡೆಸಲಾಗುತ್ತಿದೆ ಎಂದು ದೂರು ದಾಖಲಾಗಿತ್ತು. ಜುಲೈ 6 ರಂದು ರಾತ್ರಿ 1:20ರವರೆಗೆ ಪಬ್ ನಲ್ಲಿ ಮದ್ಯ ಸರಬರಾಜು ಮಾಡಲಾಗುತ್ತಿತ್ತು. ರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಪಬ್ ಮುಚ್ಚಿಲ್ಲ ಎಂಬ ಮಾಹಿತಿ ಲಭ್ಯವಾಗಿತ್ತು. ಪಬ್‌ ಗೆ ಹೋಗಿ ಪರಿಶೀಲಿಸಿದಾಗ ಅವಧಿ ಮುಗಿದಿದ್ದರೂ ಗ್ರಾಹಕರಿಗೆ ಸೇವೆ ಒದಗಿಸಲಾಗುತ್ತಿತ್ತು.  ಹೀಗಾಗಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ ಐ ಆರ್ ದಾಖಲಾಗಿತ್ತು.

ಇದೀಗ ಮತ್ತೊಮ್ಮೆ ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಪಬ್‌ ನ  ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.ಗಿತ್ತು. ಜುಲೈ 6 ರಂದು ರಾತ್ರಿ 1:20ರವರೆಗೆ ಪಬ್ ನಲ್ಲಿ ಮದ್ಯ ಸರಬರಾಜು ಮಾಡಲಾಗುತ್ತಿತ್ತು. ರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಪಬ್ ಮುಚ್ಚಿಲ್ಲ ಎಂಬ ಮಾಹಿತಿ ಲಭ್ಯವಾಗಿತ್ತು. ಪಬ್‌ ಗೆ ಹೋಗಿ ಪರಿಶೀಲಿಸಿದಾಗ ಅವಧಿ ಮುಗಿದಿದ್ದರೂ ಗ್ರಾಹಕರಿಗೆ ಸೇವೆ ಒದಗಿಸಲಾಗುತ್ತಿತ್ತು.  ಹೀಗಾಗಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ ಐ ಆರ್ ದಾಖಲಾಗಿತ್ತು.

ಇದೀಗ ಮತ್ತೊಮ್ಮೆ ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಪಬ್‌ ನ  ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

More articles

Latest article