ಬೆಂಗಳೂರು: ದೇಶಾದ್ಯಂತ ನಡೆದಿರುವ ಮತ ಕಳವು ಅಭಿಯಾನದ ಅಂಗವಾಗಿ ದೆಹಲಿಯಲ್ಲಿ ನಾಳೆ ಬೃಹತ್ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೂ ಭಾಗವಹಿಸಲಿದ್ದಾರೆ. ಈ ಪ್ರತಿಭಟನೆಯಲ್ಲಿ ಭಾಗಿಯಾಗಲು ರಾಜ್ಯದ ಸುಮಾರು 1 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುತ್ತಿದ್ದಾರೆ.
ದೆಹಲಿಗೆ ತೆರಳುವುದಕ್ಕೂ ಮುನ್ನ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಕರ್ನಾಟದಿಂದಲೂ ಮತಗಳ್ಳತನ ಅಭಿಯಾನ ಆರಂಭವಾಗಿದೆ. ಬೆಂಗಳುರಿನ ಫ್ರೀಡಂಪಾರ್ಕ್‌ನಿಂದ ಈ ಅಭಿಯಾನ ಆರಂಭವಾಗಿದೆ. ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ದೆಹಲಿಗೆ ತೆರಳಿದ್ದಾರೆ. ನಾಳೆಯ ಪ್ರತಿಭಟನೆಯಲ್ಲಿ 100ಕ್ಕೂ ಹೆಚ್ಚು ಎರಡೂ ಸದನಗಳ ಸದಸ್ಯರು ಭಾಗವಹಿಸಲಿದ್ದಾರೆ ಎಂದರು.
ಬಿಹಾರ ಚುನಾವಣೆಯಲ್ಲಿ ನಾವು ಸೋತಿದ್ದರೂ ನಮಗೆ ಆತ್ಮವಿಶ್ವಾಸವಿದೆದ್ದು, ವೋಟ್ ಚೋರಿ ಕುರಿತು ಜನಜಾಗೃತಿ ಮೂಡಿಸುತ್ತೇವೆ ಎಂದೂ ಹೇಳಿದರು.
ರಾಮ್ ಲೀಲಾ ಮೈದಾನದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಎಐಸಿಸಿ ಮುಖಂಡರು ಮತ್ತು ವಿವಿಧ ರಾಜ್ಯಗಳ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ.

