ಮತಗಳ್ಳತನ: ರಾಹುಲ್ ಗಾಂಧಿ ಬಳಿ ಸಾಕ್ಷಿ ಇದೆ: ಸಿಎಂ  ಸಿದ್ದರಾಮಯ್ಯ

Most read

ಬೆಂಗಳೂರು : ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ ಎಂದು 

 ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.

ರಾಹುಲ್ ಗಾಂಧಿ ಅವರು ಆಗಸ್ಟ್ 4 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ನಂತರ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿಯಾಗಲಿದ್ದಾರೆ ಎಂದರು.

ಆಗಸ್ಟ್ 4ರಂದು ರಾಹುಲ್ ಗಾಂಧಿ ಅವರು ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ಮುಖ್ಯ ಚುನಾವಣಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಲಿದ್ದಾರೆ. ಇವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಸಚಿವರು ಶಾಸಕರು ಮುಖಂಡರು ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ. ಮಹದೇವಪುರ ವಿಧಾನಸಭೆ ಕ್ಷೇತ್ರದಲ್ಲಿ ಕೆಲ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ದಾಖಲೆ ಇದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.

More articles

Latest article