ರಾಯ್ ಬರೇಲಿ: ಚುನಾವಣಾ ಆಯೋಗದ ನೆರವಿನೊಂದಿಗೆ ಕೇಂದ್ರ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಮತ ಕಳ್ಳತನ ಕುರಿತು ಮುಂದಿನ ದಿನಗಳಲ್ಲಿ ಮತ್ತನ್ನಷ್ಟು ಸ್ಫೋಟಕ ದಾಖಲೆಗಳನ್ನು ಒದಗಿಸುವುದಾಗಿ ಕಾಂಗ್ರೆಸ್ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ತಮ್ಮ ಲೋಕಸಭಾ ಕ್ಷೇತ್ರವಾದ ರಾಯ್ ಬರೇಲಿಯಲ್ಲಿ ಅವರು ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಮತ ಕಳ್ಳತನ ಕುರಿತು ಈಗಾಗಲೇ ಹಲವು ಸಾಕ್ಷ್ಯಗಳನ್ನು ಒದಗಿಸಲಾಗಿದೆ. ಕರ್ನಾಟಕ, ಮಹಾರಾಷ್ಟ್ರ ಹಾಗೂ ಹರಿಯಾಣ ರಾಜ್ಯಗಳಲ್ಲಿ ಮತಗಳ್ಳತನ ನಡೆದಿರುವುದಕ್ಕೆ ನಿಖರ ಸಾಕ್ಷ್ಯ ಒದಗಿಸಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸ್ಫೋಟಕ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು.
ಮತಗಳ್ಳರೇ ಅಧಿಕಾರದಿಂದ ಕೆಳಗಿಳಿಯಿರಿ ಎಂದು ದೇಶಾದ್ಯಂತ ಮತದಾರರು ಗುಡುಗುತ್ತಿದ್ದಾರೆ. ಹಲವು ರಾಜ್ಯಗಳಲ್ಲಿ ಮತಗಳ್ಳತನ ನಡೆಸಿಯೇ ಸರ್ಕಾರ ರಚನೆ ಮಾಡಲಾಗಿದೆ ಎಂದೂ ರಾಹುಲ್ ಗಾಂಧಿ ಆರೋಪಿಸಿದರು.