ನವದೆಹಲಿ: ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ದೇಶಾದ್ಯಂತ ನಡೆದಿರುವ ಮತ ಕಳ್ಳತನ ಆರೋಪಕ್ಕೆ ಪುರಾವೆಯಾಗಿ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹೊಸ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾರೆ.
‘ನಿಮ್ಮ ಮತದ ಕಳ್ಳತನ, ನಿಮ್ಮ ಹಕ್ಕುಗಳ ಕಳ್ಳತನ ಹಾಗೂ ನಿಮ್ಮ ಗುರುತಿನ ಕಳ್ಳತನ’ ಎಂದು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ರಾಹುಲ್ ಪೋಸ್ಟ್ ಮಾಡಿದ್ದು, ಬಿಜೆಪಿಯ ಹಿಡಿತದಿಂದ ಸಾಂವಿಧಾನಿಕ ಸಂಸ್ಥೆಗಳನ್ನು ರಕ್ಷಿಸಲು ಹೋರಾಟ ನಡೆಸುವಂತೆ ಅವರು ಕರೆ ಕೊಟ್ಟಿದ್ದಾರೆ.
ರಾಹುಲ್ ಗಾಂಧಿ ಬಿಡುಗಡೆಗೊಳಿಸಿರುವ ವಿಡಿಯೋವನ್ನು ಹಂಚಿಕೊಂಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಿಮ್ಮ ಮತದಾನದ ಹಕ್ಕನ್ನು ಕಳವು ಮಾಡಲು ಬಿಡಬೇಡಿ. ಅಐೋಗ ಮತ್ತು ಕೇಂದ್ರ ಸರಕಾರಕ್ಕೆ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯಿರಿ. ಮತ ಕಳ್ಳತನದ ವಿರುದ್ಧ ಧ್ವನಿ ಎತ್ತಿ, ಬಿಜೆಪಿ ಹಿಡಿತದಿಂದ ಸಂವಿಧಾನಿಕ ಸಂಸ್ಥೆಗಳನ್ನು ರಕ್ಷಿಸಿ ಎಂದು ಮನವಿ ಮಾಡಿದ್ದಾರೆ.
ಪ್ರಿಯಾಂಕಾ ಗಾಂಧಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಈ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಮತ ಕಳ್ಳತನ ಆರೋಪ ಸಂಬಂಧ ಕಾಂಗ್ರೆಸ್ ದೇಶಾದ್ಯಂತ ನಡೆಸುತ್ತಿರುವ ಅಭಿಯಾನವನ್ನು ಮತ್ತಷ್ಟು ಚುರುಕುಗೊಳಿಸಿದೆ.