ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲೂ ಮತ ಕಳ್ಳತನ ಶಂಕೆ; ಹೋರಾಟಕ್ಕೆ ಸಿದ್ಧ ಎಂದ ಕೈ ಮುಖಂಡ ವಿನಯಕುಮಾರ್ ಸೊರಕೆ

Most read

ರಾಮನಗರ: ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ  ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲೂ ಮತಗಳ ಕಳ್ಳತನ ಮಾಡಿರುವ ಅನುಮಾನಗಳಿವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿಯವರು ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದಲ್ಲಿ ಮತ ಕಳವು ಮಾಡಿರುವಂತೆಯೇ ಈ ಕ್ಷೇತ್ರದಲ್ಲೂ ಮತಗಳನ್ನು ಕದ್ದಿರುವ ಬಗ್ಗೆ ಕಾರ್ಯಕರ್ತರು ಮಾಹಿತಿ ನೀಡುತ್ತಿದ್ದಾರೆ. ಡಿ.ಕೆ. ಸುರೇಶ್ ಅವರು ಅಭ್ಯರ್ಥಿ ಎನ್ನುವ ಕಾರಣಕ್ಕಾಗಿಯೇ ಬೆಂಗಳೂರು ಗ್ರಾಮಾಂತರದಲ್ಲೂ ಮತ ಕಳ್ಳತನ ನಡೆಸಿರುವ ಅನುಮಾನ ಇದೆ ಎಂದು ವಿನಯಕುಮಾರ್ ಸೊರಕೆ ತಿಳಿಸಿದರು.

ಬೆಂಗಳೂರು ಸೆಂಟ್ರಲ್‌ ಕ್ಷೇತ್ರದ ಮಹದೇವಪುರ‌ ವಿಧಾನಸಭಾ ಕ್ಷೇತ್ರದಲ್ಲಿ ಮತ ಕಳ್ಳತನ ನಡೆಸಿರುವ ಮಾದರಿಯಲ್ಲೇ ಈ ಕ್ಷೇತ್ರದಲ್ಲಿಯೂ ಮತಗಳನ್ನು ಕಳವು ಮಾಡಿರುವ ಅನುಮಾನ ಇದೆ ಎಂದು ಬೂತ್‌ ಮಟ್ಟದ ಕಾರ್ಯಕರ್ತರೇ ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ಬೂತ್ ಮಟ್ಟದಿಂದ ಮತದಾರರ ಪಟ್ಟಿ ಸಂಗ್ರಹಿಸಿ ಮಾಹಿತಿ ಕಲೆ ಹಾಕಲಾಗುತ್ತಿದೆ. ಒಂದು ವೇಳೆ ಮತ ಕಳವು ಮೇಲ್ನೋಟಕ್ಕೆ ಸಾಬೀತಾದರೆ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದರು.

More articles

Latest article