ಮತಗಳ್ಳತನ: ‘ಅಣು ಬಾಂಬ್’ ನಂತಹ ಸಾಕ್ಷ್ಯ ಇದೆ: ರಾಹುಲ್ ಗಾಂಧಿ ಹೊಸ ಬಾಂಬ್

Most read

ನವದೆಹಲಿ: ಮತಗಳ ಕಳ್ಳತನ ಕುರಿತು ಕಾಂಗ್ರೆಸ್‌ ಮುಖಂಡ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿರುವ ಆರೋಪ ಆಧಾರರಹಿತ ಎಂದು ಚುನಾವಣಾ ಆಯೋಗ ತಿರುಗೇಟು ನೀಡಿದೆ. ಇಂತಹ ಬೇಜವಾಬ್ದಾರಿಯುತ ಹೇಳಿಕೆಯನ್ನು ನಿರ್ಲಕ್ಷಿಸುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.\

ಚುನಾವಣಾ ಆಯೋಗವು ಬಿಜೆಪಿ ಅನುಕೂಲಕ್ಕಾಗಿ ಮತಗಳ್ಳತನದಲ್ಲಿ ಭಾಗಿಯಾಗಿರುವುದಕ್ಕೆ ಶೇ. 100ರಷ್ಟು ಸಾಕ್ಷ್ಯಗಳಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಲವಾರು ದಿನಗಳಿಂದ ಆರೋಪಿಸುತ್ತಲೇ ಬಂದಿದ್ದಾರೆ.

ಶೀಘ್ರದಲ್ಲೇ ಸಾಕ್ಷ್ಯಗಳನ್ನು ಬಿಡುಗಡೆ ಮಾಡಲಿದ್ದೇವೆ. ನಾವು ನಮ್ಮದೇ ಆದ ತನಿಖೆಯನ್ನು ನಡೆಸಿದ್ದೇವೆ. ಇದಕ್ಕಾಗಿ ಆರು ತಿಂಗಳ ಸಮಯ ತೆಗೆದುಕೊಂಡಿದ್ದೇವೆ. ಅಣು ಬಾಂಬ್‌ ನಂತಹ ಪುರಾವೆಯನ್ನು ನಾವು ಹೊಂದಿದ್ದೇವೆ. ಇದು ಸ್ಫೋಟಗೊಂಡಾಗ ಚುನಾವಣಾ ಆಯೋಗಕ್ಕೆ ಮರೆಮಾಚಲು ಸಾಧ್ಯವಾಗುವುದಿಲ್ಲ ಎಂದು ರಾಹುಲ್ ತಿರುಗೇಟು ನೀಡಿದ್ದಾರೆ.

ಅವರು ಪ್ರತಿದಿನ ಇಂತಹ ನಿರಾಧಾರ ಆರೋಪಗಳನ್ನು  ಮಾಡುತ್ತಲೇ ಬಂದಿದ್ದಿ, ಈ ಆರೋಪಗಳನ್ನು ಚುನಾವಣಾ ಆಯೋಗ ನಿರ್ಲಕ್ಷಿಸುತ್ತದೆ. ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನಿರ್ಲಕ್ಷಿಸಿ ನ್ಯಾಯ ಹಾಗೂ ಪಾರದರ್ಶಕ ರೀತಿಯಲ್ಲಿ ಕೆಲಸ ಮುಂದುವರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೆಔಎ ಎಂದು ರಾಹುಲ್ ಗಾಂಧಿ ಟೀಕೆಗಳಿಗೆ ಚುನಾವಣಾ ಆಯೋಗ ಪ್ರತಿಕ್ರಿಯಿಸಿದೆ.

More articles

Latest article