ಹೊಸದಿಲ್ಲಿ: 11 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ 93 ಲೋಕಸಭಾ ಸ್ಥಾನಗಳಿಗೆ ಇಂದು ನಡೆಯುತ್ತಿರುವ ಚುನಾವಣೆಯಲ್ಲಿ ಬೆಳಿಗ್ಗೆ 9 ಗಂಟೆಯ ಒಳಗೆ 10.5% ಮತದಾನ ದಾಖಲಾಗಿದೆ.
ಒಟ್ಟು ಏಳು ಹಂತದ ಮತದಾನ ಪ್ರಕ್ರಿಯೆಯಲ್ಲಿ ಇಂದು ಮೂರನೇ ಹಂತದ ಚುನಾವಣೆ ನಡೆಯುತ್ತಿದ್ದು, 120 ಮಹಿಳೆಯರು ಸೇರಿದಂತೆ 1,300 ಕ್ಕೂ ಹೆಚ್ಚು ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.
ಗುಜರಾತ್‌ನಲ್ಲಿ 26, ಕರ್ನಾಟಕದಲ್ಲಿ 14, ಮಹಾರಾಷ್ಟ್ರದಲ್ಲಿ 11, ಉತ್ತರ ಪ್ರದೇಶದಲ್ಲಿ 10, ಮಧ್ಯಪ್ರದೇಶದಲ್ಲಿ 8, ಛತ್ತೀಸ್‌ಗಢದಲ್ಲಿ 7, ಬಿಹಾರದಲ್ಲಿ 5, ಅಸ್ಸಾಂನಲ್ಲಿ 4, ಪಶ್ಚಿಮ ಬಂಗಾಳದಲ್ಲಿ 4, ಗೋವಾದಲ್ಲಿ 2 ಸ್ಥಾನಗಳಲ್ಲಿ ಮೂರನೇ ಹಂತದ ಮತದಾನ ನಡೆಯುತ್ತಿದೆ. ಕೇಂದ್ರಾಡಳಿತ ಪ್ರದೇಶಗಳಾದ ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯುನಲ್ಲೂ ಇಂದು ಮತದಾನ ನಡೆಯುತ್ತಿದೆ.
ಲೋಕಸಭೆ ಚುನಾವಣೆಯು ಏಪ್ರಿಲ್ 19 ರಿಂದ ಜೂನ್ 1 ರವರೆಗೆ ಏಳು ಹಂತಗಳಲ್ಲಿ ನಡೆಯುತ್ತಿದ್ದು, ಜೂನ್ 4ಕ್ಕೆ ಮತ ಎಣಿಕೆಯನ್ನು ನಿಗದಿಪಡಿಸಲಾಗಿದೆ.