ಕಾದು ನೋಡುವ ತಂತ್ರಕ್ಕೆ ಮೊರೆ ಹೋದ ರಾಮಲಿಂಗಾರೆಡ್ಡಿ

ಬೆಂಗಳೂರು : ನಿಮ್ಮ ರಾಜೀನಾಮೆ ಸ್ವೀಕರಿಸುವುದಿಲ್ಲ ಎಂದು ರಣದೀಪ್‌ ಸುರ್ಜೆವಾಲ ಹೇಳಿದ್ದಾರೆ ಸಿಎಂ, ಸುರ್ಜೆವಾಲಾ ಏನು ತೀರ್ಮಾನ ಮಾಡುತ್ತಾರೆ ಎಂದು ಕಾದು ನೋಡೋಣ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಣದೀಪ್‌ ಸುರ್ಜೆವಾಲ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ರಾಮಲಿಂಗಾರೆಡ್ಡಿ ಈ ಹೇಳಿಕೆ ನೀಡಿದ್ದಾರೆ.

ಜಲಸಂಪನ್ಮೂಲ ಖಾತೆಯನ್ನು ನಾನು ಕೇಳಿರಲಿಲ್ಲ. ನನಗೆ ನೀರಾವರಿ ಇಲಾಖೆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಆದರೆ, ಸಚಿವ ಸ್ಥಾನ, ಇಂತಹದ್ದೇ ಖಾತೆ ಬೇಕು ಎಂದು ಕೇಳಿರಲಿಲ್ಲ. ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ ಎಂಬ ಅಸಮಾಧಾನದಿಂದ ರಾಜೀನಾಮೆ ನೀಡಿದ್ದೆ. ಆದರೆ, ರಾಜೀನಾಮೆ ಅಂಗೀಕರಿಸುವುದಿಲ್ಲ ಎಂದು ಹೇಳಿದ್ದಾರೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು. 

ಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ನಮ್ಮ ಕುಟುಂಬದ ಸಮಸ್ಯೆ ನಾವು ಬಗೆಹರಿಸಿಕೊಳ್ಳುತ್ತೇವೆ. ನಾನು ಮುಖ್ಯಮಂತ್ರಿ, ಅವರು (ರಾಮಲಿಂಗಾರೆಡ್ಡಿ) ಸಚಿವರು. ಆದರೂ ನಾವೆಲ್ಲರೂ ಸ್ನೇಹಿತರು. ರಾಮಲಿಂಗಾರೆಡ್ಡಿ ಅವರು ಪಕ್ಷದ ಹಿರಿಯರು, ಬೆಂಗಳೂರಿನಲ್ಲಿ ಪಕ್ಷ ಉಳಿಸುತ್ತಿರುವವರು. ಪಕ್ಷ ಬೆಳೆಸಲು ಕೆಲಸ ಮಾಡುತ್ತಿರುವವರು ಎಂದು ಹೇಳಿದರು.

More articles

Latest article

Most read