Wednesday, December 11, 2024

ವಕ್ಫ್ ಹೋರಾಟ; ಉಪಚುನಾವಣೆಯಲ್ಲಿ ಸೋತ ಬಿಜೆಪಿಯ ಹೊಸ ನಾಟಕ; ಸಿಎಂಸಿದ್ದರಾಮಯ್ಯ

Most read

ಹಾಸನ: ಉಪಚುನಾವಣೆಯಲ್ಲಿ  ಮೂರು ಕ್ಷೇತ್ರಗಳಲ್ಲಿ ಸೋಲುಂಡಿರುವ ಬಿಜೆಪಿಯವರು ‘ವಕ್ಫ್ ಹೋರಾಟ’ ಎಂಬ ರಾಜಕೀಯ ನಾಟಕ ಪ್ರಾರಂಭಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಅವರು ಇಂದು ಭುವನಹಳ್ಳಿ ಗ್ರಾಮ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿಯವರ ವಕ್ಫ್ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ರಾಜಕೀಯಕ್ಕಾಗಿ ಹೋರಾಟ ಕೈಗೊಂಡಿದ್ದಾರೆ. 2014ರಲ್ಲಿ ಬಿಜೆಪಿಯವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ  ವಕ್ಫ್ ಆಸ್ತಿಗಳನ್ನು ತೆರವುಗೊಳಿಸಿ ಕೊಡುವ ಭರವಸೆಯನ್ನು ನೀಡಿ,  ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದಾಗ,ಅತಿಕ್ರಮಣ ಮಾಡಿಕೊಂಡಿರುವವರಿಗೆ ನೋಟೀಸುಗಳನ್ನೂ ನೀಡಿದ್ದರು.  ಬಿಜೆಪಿಯವರು ರಾಜಕೀಯ ಇಬ್ಬಂದಿತನವನ್ನು ಇಬ್ಬಂದಿ ನೀತಿಯನ್ನು ಪಾಲಿಸುತ್ತಿದ್ದಾರೆ ಎಂದರು.

ಇಂದು  ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆಯನ್ನು ಜನವರಿ 25 ಕ್ಕೆ ನಿಗದಿಗೊಂಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಕಾನೂನು ತಜ್ಞರೊಂದಿಗೆ ಮಾಹಿತಿ ಪಡೆದು ಚರ್ಚಿಸುತ್ತೇನೆ ಎಂದರು.

More articles

Latest article