ಕೋಲಾರ: ವಕ್ಫ್ ಕಾಯ್ಧೆ ವಿರೋಧಿಸಿ ಮುಸ್ಲಿಂ ಸಮುದಾಯದಿಂದ ಮೌನ ಪ್ರತಿಭಟನೆ

Most read

ಕೋಲಾರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ ಕಾಯ್ದೆಯನ್ನು ವಿರೋಧಿಸಿ ಮುಸ್ಲಿಂ ಸಮುದಾಯದವರು ಇಂದು ಶುಕ್ರವಾರದ ಪ್ರಾರ್ಥನೆಯ ನಂತರ ಪ್ರಾರ್ಥನಾ ಮಂದಿರದ ರಸ್ತೆಯಲ್ಲೇ ಮಾನವ ಸರಪಳಿ ರಚಿಸಿ ಮೌನ ಪ್ರತಿಭಟನೆ ನಡೆಸಿದರು.

ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಕರೆಯ ಮೇರೆಗೆ ಕೋಲಾರ ನಗರದ ಎಲ್ಲಾ ಪ್ರಾರ್ಥನಾ ಮಂದಿರಗಳ ಮುಂಭಾಗದಲ್ಲಿ ಮುಸ್ಲಿಂ ಸಮುದಾಯದವರು ಈ  ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.  ಟಿಪ್ಪು ರಸ್ತೆಯಲ್ಲಿರುವ ಬಿಲಾಲ್ ಮಸೀದಿ ಮುಂಭಾಗ ಹಾಗೂ ಅನ್ಸಾರ್ ನಗರದಲ್ಲಿರುವ ಅನ್ಸಾರ್  ಮಸೀದಿಯಲ್ಲಿ ಮುಸ್ಲಿಂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಕೇಂದ್ರ ಸರ್ಕಾರದ ವಕ್ಫ್ ಕಾಯ್ದೆಯ ನಡೆಗೆ ವಿರೋಧ  ವ್ಯಕ್ತಪಡಿಸಿ ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಮುಖಂಡರು ತಿಳಿಸಿದರು.

More articles

Latest article