ವಾಷಿಂಗ್ಟನ್: ಅಮೆರಿಕ ಪೌರತ್ವ ಪಡೆಯಲು ಶ್ರೀಮಂತ ವಲಸಿಗರಿಗಾಗಿ ‘ಗೋಲ್ಡ್ ಕಾರ್ಡ್’ಗಳನ್ನು ಪರಿಚಯಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚಿಂತನೆ ನಡೆಸುತ್ತಿದ್ದಾರೆ. ಈ ಮೂಲಕ ಅಮೆರಿಕದ ಪೌರತ್ವ ಪಡೆಯುವುದನ್ನು ಸುಲಭಗೊಳಿಸಲು ಮುಂದಾಗಿದ್ದಾರೆ. ಈ ಕಾರ್ಡ್‌ಗಳನ್ನು ಶ್ರೀಮಂತ ವಲಸಿಗರು 5 ಮಿಲಿಯನ್ ಅಮೆರಿಕನ್ ಡಾಲರ್ (ಅಂದಾಜು 43 ಕೋಟಿ 54 ಲಕ್ಷ) ಪಾವತಿಸಿ ಖರೀದಿಸಬಹುದಾಗಿದೆ ಎಂದು ಅಲ್ಲಿನ ಮಾಧ್ಯಮಗಳು ತಿಳಿಸಿವೆ.
ಅಮೆರಿಕದಲ್ಲಿ ಉದ್ಯೋಗಗಳನ್ನು ಸೃಷ್ಟಿಸಲು ಮತ್ತು ಬೃಹತ್ ಮೊತ್ತದ ಹಣವನ್ನು ಹೂಡಿಕೆ ಮಾಡುವ ವಿದೇಶಿ ಹೂಡಿಕೆದಾರರಿಗೆ, ಅಮೆರಿಕದ ಶಾಶ್ವತ ನಿವಾಸಿಗಳಾಗಲು ಅನುವು ಮಾಡಿಕೊಡುವ ಇಬಿ-5 ವೀಸಾ ಯೋಜನೆಯನ್ನು ಗೋಲ್ಡ್ ಕಾರ್ಡ್‌ನೊಂದಿಗೆ ಬದಲಾಯಿಸಲಾಗುವುದು ಎಂದು ಟ್ರಂಪ್ ತಿಳಿಸಿದ್ದಾರೆ.
ಈ ಗೋಲ್ಡ್ ಕಾರ್ಡ್‌ಗಳು ಈಗಾಗಲೇ ಅಸ್ತಿತ್ವದಲ್ಲಿರುವ ಗ್ರೀನ್ ಕಾರ್ಡ್ ನಿವಾಸಿಗಳು ಮತ್ತು ಹೊಸ ವಿದೇಶಿಯರಿಗೆ ಅಮೆರಿಕನ್ ಪೌರತ್ವದ ಮಾರ್ಗವನ್ನು ಮತ್ತಷ್ಟು ಸುಲಭಗೊಳಿಸಲಿದೆ. ಸುಮಾರು ಒಂದು ಮಿಲಿಯನ್ ಗೋಲ್ಡ್ ಕಾರ್ಡ್‌ಗಳನ್ನು ಮಾರಾಟ ಮಾಡುವ ಉದ್ದೇಶವಿದ್ದು, ಈ ಉಪಕ್ರಮವು ರಾಷ್ಟ್ರೀಯ ಸಾಲವನ್ನು ತ್ವರಿತವಾಗಿ ತೀರಿಸಲು ಸಹಾಯವಾಗಲಿದೆ ಎಂದು ಟ್ರಂಪ್ ನಿರೀಕ್ಷಿಸಿದ್ದಾರೆ. ಇಬಿ-5 ಯೋಜನೆಯು ಅಮೆರಿಕನ್ ವ್ಯವಹಾರಗಳಲ್ಲಿ ಹೂಡಿಕೆ ಮಾಡುವ ಭರವಸೆ ನೀಡುವ ವಿದೇಶಿಯರಿಗೆ, ಗ್ರೀನ್ ಕಾರ್ಡ್‌ಗಳನ್ನು ನೀಡುತ್ತದೆ. ನಾವು ಈಗ ಸುಮಾರು 5 ಮಿಲಿಯನ್ ಅಮೆರಿಕನ್ ಡಾಲರ್ ಮೊತ್ತದ ಗೋಲ್ಡ್ ಕಾರ್ಡ್‌ಗಳನ್ನು ಮಾರಾಟ ಮಾಡಲಿದ್ದೇವೆ. ಇದು ನಿಮಗೆ ಗ್ರೀನ್ ಕಾರ್ಡ್ ಸವಲತ್ತುಗಳನ್ನು ನೀಡುವುದರ ಜೊತೆಗೆ, ಅಮೆರಿಕನ್ ಪೌರತ್ವ ಪಡೆಯುವ ಮಾರ್ಗವನ್ನು ಸುಲಭಗೊಳಿಸಲಿದೆ ಎಂದು ಹೇಳಿದ್ದಾರೆ.