ವಕ್ಫ್ ನೋಟಿಸ್ : ಕೋಲಾರದಲ್ಲಿ ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ

ಕೋಲಾರ: ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿರುವುದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ನಡಸಿತು.

ಕೋಲಾರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರ ಮತ್ತು ಸಚಿವ ಜಮೀರ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಾದ್ಯಂತ ವಕ್ಫ್ ಬೋರ್ಡ್ನಿಂದ ರೈತರು, ಮಠ, ಗೋಮಾಳ, ರೈತರ ಜಮೀನು ಸೇರಿದಂತೆ ಹಿಂದೂಗಳ ಜಮೀನನ್ನು ಕಬಳಿಕೆ ಮಾಡುತ್ತಿದ್ದಾರೆಂದು ಬಿಜೆಪಿ ಮುಖಂಡರು ಆರೋಪ ಮಾಡಿದರು.

ಪ್ರತಿಭಟನೆಯಲ್ಲಿ ಮಾಜಿ ಸಂಸದ ಎಸ್. ಮುನಿಸ್ವಾಮಿ, ಮಾಜಿ ಸಚಿವ ವರ್ತೂರ್ ಪ್ರಕಾಶ್, ಸೇರಿದಂತೆ ಸಾವಿರಾರು ಜನರು ಭಾಗಿಯಾಗಿದ್ದರು.

More articles

Latest article

Most read