ಬೆಂಗಳೂರು: ಮಕ್ಕಳಲ್ಲಿ ನೀರಿ ಕುಡಿಯುವ ಅಭ್ಯಾಸವನ್ನು ಉತ್ತೇಜಿಸಲು ಕೇರಳ ಮಾದರಿಯಲ್ಲಿ ರಾಜ್ಯದಲೂ ವಾಟರ್ ಬೆಲ್ (Water Bell) ಯೋಜನೆಯನ್ನು ಜಾರಿಗೊಳಿಸಲು ರಾಜ್ಯ ಶಿಕ್ಷಣ ಇಲಾಖೆ ಉದ್ದೇಶಿಸಿದೆ.
ಶಾಲಾ ಅವಧಿಯಲ್ಲಿ ಮಕ್ಕಳಿಗೆ ನೀರು ಕುಡಿಯುವುದನ್ನು ನೆನಪಿಸಲು ಈ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ.
ಮಕ್ಕಳು ಹೆಚ್ಚು ನೀರು ಕುಡಿದಷ್ಟೂ ಆರೋಗ್ಯಕ್ಕೆ ಉತ್ತಮ. ಹೀಗಾಗಿ, ಶಾಲೆಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವುದು ಮೂಲ ಉದ್ದೇಶವಾಗಿದೆ.
ಕೇರಳ ಸರ್ಕಾರ ಹಲವು ವರ್ಷಗಳ ಹಿಂದೆಯೇ ಈ ಕಾರ್ಕ್ರಮವನ್ನು ಜಾರಿಗಳಿಸಿದ್ದು ಉತ್ತಮ ಫಲಿತಾಂಶ ಕಂಡು ಬಂದಿದೆ. ಅಲ್ಲಿನ ಶಾಲೆಗಳಲ್ಲಿ ದಿನಕ್ಕೆ ಎರಡು ಬಾರಿ ವಾಟಲ್ ಬೆಲ್ ರಿಂಗಣಿಸಲಿದೆ. ಬೆಳಗ್ಗೆ 10:30 ಮತ್ತು ಮಧ್ಯಾಹ್ನ 2:30 ರ ಅವಧಿಯಲ್ಲಿ ವಾಟರ್ ಬೆಲ್ ಆಗಲಿದ್ದು ಆಗ ಮಕ್ಕಳು ನೀರು ಕುಡಿಯಲಿದ್ದಾರೆ.
ಈ ಕಾರ್ಯಕ್ರಮವನ್ನು ರಾಜ್ಯದಲ್ಲೂ ಜಾರಿಗೊಳಿಸಲು ಶಿಕ್ಷಣ ಇಲಾಖೆ ಮುಂದಾಗಿದ್ದು ಹಲವು ಸುತ್ತಿನ ಮಾತುಕತೆಗಳು ನಡೆದಿವೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಸ್ಥೆಯಿಂದ ಈ ಕಾರ್ಯಕ್ರಮವನ್ನು ಜಾರಿಗೊಳಿಸಲು ಮುಂದಾಗಿದ್ದಾರೆ.