ವಯನಾಡ್‌ ಉಪ ಚುನಾವಣೆ: ನಾಳೆ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ, ಸಿಎಂ ಸಿದ್ದರಾಮಯ್ಯ ಭಾಗಿ!

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರ ಅವರು ನಾಳೆ ಅಂದರೆ ಬುಧವಾರ ವಯನಾಡ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಅದಕ್ಕಾಗಿ ನಾಳೆ ಅವರು ಕೇರಳ ಪ್ರವಾಸ ಕೈಗೊಂಡಿದ್ದಾರೆ.

ನಾಮಪತ್ರ ಮುನ್ನ ವಯನಾಡ್ ನ ಕಲ್ಪಟ್ಟ ನಗರದಲ್ಲಿ ಬೃಹತ್ ರೋಡ್ ಶೋ ಇದ್ದು ಇದರಲ್ಲಿ ಪ್ರಿಯಾಂಕಾ ಗಾಂಧಿ ಜೊತೆ ಸಿದ್ದರಾಮಯ್ಯ ಅವರು ಕೂಡ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಸಂಸದ ರಾಹುಲ್ ಗಾಂಧಿ ಕೂಡ ಜೊತೆಯಾಗಲಿದ್ದಾರೆ.

ಮೈಸೂರಿನಿಂದ ವಯನಾಡ್‌ಗೆ ತೆರಳಲು ಸಿಎಂ ಸಿದ್ದರಾಮಯ್ಯ ಅವರು ತೀರ್ಮಾನಿಸಿದ್ದು, ಸಂಜೆ ವೇಳೆಗೆ ವಾಪಸ್ ವಯನಾಡ್ ನಿಂದ ಮೈಸೂರಿಗೆ ಬರುವ ಪ್ಲಾನ್ ಮಾಡಿಕೊಂಡಿದ್ದಾರೆ.

More articles

Latest article

Most read