ವಯನಾಡು ಭೂಕುಸಿತ: ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

Most read

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡಿದ್ದಾರೆ. ಕೇರಳದ ಭೂಕುಸಿತದಲ್ಲಿ ಪ್ರಾಣ ಕಳೆದುಕೊಂಡ ಕನ್ನಡಿಗರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇರಳ ವಯನಾಡಿನಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಳಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ.

ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ.

More articles

Latest article