ವಯನಾಡ್‌ ಲೋಕಸಭಾ ಉಪಚುನಾವಣೆ : ಶೇ.27.04 ರಷ್ಟು ಮತದಾನ

ವಯನಾಡ್‌ : ಮೊದಲ ಬಾರಿಗೆ ಚುನಾವಣಾ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ವಾದ್ರ ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಇಡೀ ಜಿಲ್ಲೆಯಲ್ಲಿ ಮತದಾನ ಬಹಳ ಶಾಂತಿಯುತವಾಗಿ ನಡೆಯುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗ್ಗೆ 11 ಗಂಟೆಯವರೆಗೆ ಶೇಕಡಾ 27.04 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಮತಗಟ್ಟೆಯಲ್ಲಿ ಜನರು ಸಾಲುಗಟ್ಟಿ ನಿಂತು ತಮ್ಮ ಹಕ್ಕಾದ ಮತದಾನವನ್ನು ಮಾಡುತ್ತಿದ್ದಾರೆ.

ಇಡೀ ಜಿಲ್ಲೆಯಲ್ಲಿ 1354 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 14 ಲಕ್ಷಕ್ಕೂ ಅಧಿಕ ಮಂದಿ ಮತ ಚಲಾಯಿಸಲು ನೊಂದಾಯಿಸಿಕೊಂಡಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ರಾಜೀನಾಮೆಯಿಂದ ಈ ಕ್ಷೇತ್ರ ತೆರವಾಗಿತ್ತು. ಸಾರ್ವತ್ರಿಕ ಚುನಾವಣೆಯಲ್ಲಿ ವಯನಾಡ್‌ ಹಾಗೂ ಉತ್ತರ ಪ್ರದೇಶದ ರಾಯ್‌ ಬರೇಲಿ ಯಿಂದ ಸ್ಪರ್ಧಿಸಿದ್ದ ರಾಹುಲ್‌ ಗಾಂಧಿ ಎರಡು ಕ್ಷೇತ್ರದಲ್ಲಿ ಗೆದ್ದಿದ್ದರು. ಬಳಿಕ ರಾಯಬರೇಲಿಯನ್ನು ಉಳಿಸಿಕೊಂಡರು.

More articles

Latest article

Most read