ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಇಡಿ ವಶದಲ್ಲಿರುವ ಮಾಜಿ ಸಚಿವ ನಾಗೇಂದ್ರ ಹೇಳಿದ್ದೇನು?

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಂದು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ನಾಗೇಂದ್ರ ಅವರೇ ಪ್ರತಿಕ್ರಿಯೆ ನೀಡಿದ್ದಾರೆ.

ಶಾಂತಿನಗರ ಇಡಿ ಕಚೇರಿಯಿಂದ ನಾಗೇಂದ್ರ ಅವರು ಹೊರಬರುತ್ತಿದ್ದಂತೆ ಸುದ್ದಿಗಾರರ ಜೊತೆ ಮಾತನಾಡಿ, ‘ನನ್ನನ್ನು ಸುಮ್ಮನೆ ಕರೆದುಕೊಂಡು ಬಂದಿದ್ದಾರೆ. ಇದರ ಬಗ್ಗೆ ನನಗೇನು ಗೊತ್ತಿಲ್ಲ’ ಎಂದು ನಾಗೇಂದ್ರ ಹೇಳಿದ್ದಾರೆ.

ಮಾಜಿ ಸಚಿವ ನಾಗೇಂದ್ರ ಅವರ ಪಿಎ ಹರೀಶ್‌ ಅವರನ್ನು ಇಡಿ ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದರು. ವಿಚಾರಣೆ ಬಳಿಕ ಇಂದು ನಾಗೇಂದ್ರ ಅವರನ್ನು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆಯಲಾಗಿದೆ.

ಈ ಪ್ರಕರಣ ಸಂಬಂದ ರಾಜ್ಯದಲ್ಲಿ ಹಲವೆಡೆ 12 ಕಡೆ ಇಡಿ ದಾಳಿ ಮಾಡಿ ಶೋಧ ನಡೆಸಿತ್ತು. ಈಗ ಇಡಿ ಒಬ್ಬೊಬ್ಬರನ್ನೇ ವಶಕ್ಕೆ ಪಡೆಯುತ್ತಿದೆ.

More articles

Latest article

Most read