ಹಾಸನದ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವಿಚಾರಕ್ಕೆ ಕುಮಾರಸ್ವಾಮಿ ನಮ್ಮ ಕುಟುಂಬ ಬೇರೆ ಅವರ ಕುಟುಂಬ ಬೇರೆ ಎಂದಿದ್ದರು. ಅದಕ್ಕೆ ಡಿಕೆ ಶಿವಕುಮಾರ್ ಉತ್ತರ ಕೊಟ್ಟಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ಪೆನ್ ಡ್ರೈವ್ ವಿಚಾರ ಚರ್ಚೆ ಮಾಡಿಲ್ಲ. ಕಾನೂನು ಇದೆ, ಗೃಹ ಸಚಿವರಿಗೆ ಪವರ್ ಕೊಟ್ಟಿದ್ದಾರೆ. ಕುಮಾರಸ್ವಾಮಿ ಅವರೇ ಪವರ್ ಕೊಟ್ಟಿದ್ದಾರೆ. ಕುಮಾರಸ್ವಾಮಿ ಅವರಿಗೆ ಮತ್ತು ಅವರ ಕುಟುಂಬಕ್ಕೆ ನನ್ನ ನೆನಸಿಕೊಳ್ಳದೆ ಸ್ಪೂರ್ತಿ ಇರಲ್ಲ. ಕುಮಾರಸ್ವಾಮಿ ಅವರ ಭಾಷಣ ಕೇಳಿದ್ದೇನೆ. ನನ್ನ ಮಗ ಎಂದು ಹೇಳಿದ್ದಾರೆ. ತಪ್ಪೇನು ಇಲ್ಲ ಕುಟುಂಬದ ಕುಡಿ. ನೂಲಿನಂತೆ ಸೀರೆ. ಹಳೆ ವಿಡಿಯೋ ಎಂದು ರೇವಣ್ಣ ಹೇಳಿದ್ದಾರೆ. ಅವರೇ ಒಪ್ಪಿಕೊಂಡಿದ್ದಾರೆ, ಗೌಡರು ತೀರ್ಮಾನ ಮಾಡ್ತಾರೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.
ದೇವರಾಜೇಗೌಡ ಅಮಿತ್ ಶಾಗೆ ಪತ್ರ ಬರೆದಿದ್ದಾರೆ. ನಮ್ಮ ಬಳಿ ಇದ್ದಿದ್ದರೆ ಗೊತ್ತಿದ್ದರೆ, ಬೆಳಿಗ್ಗೆ ಡ್ರೈವರ್ ಅಂತೆ, ಬಿಜೆಪಿಯವರು ಮಾಡಿದ್ದಾರೆ ಎಂದು ಹೇಳಿದ್ದಾರೆ. ನಾನಂತ ಇಂತಹ ಚಿಲ್ಲರೆ ಕೆಲಸ ಮಾಡಲ್ಲ. ಚುನಾವಣೆಯಲ್ಲಿ ಫೇಸ್ ಮಾಡ್ತೇನೆ. ನಾನು ಪೆನ್ ಡ್ರೈವ್ ಇದೆ ಎಂದು ಎದುರಿಸಲ್ಲ. ಅಸೆಂಬ್ಲಿಗೆ ಬನ್ನಿ ಎಂದು ಕರೆದಿದ್ದೇನೆ. ಅಮಿತ್ ಶಾ ಮಾತಾಡಿದ್ದಾರೆ. ಕರ್ನಾಟಕದಲ್ಲಿ ಮಹಿಳೆಯರ ರಕ್ಷಣೆ ಬಗ್ಗೆ ಮಾತಾಡುತ್ತಾರೆ. ಉಡುಪಿಯಲ್ಲಿ ಪೋಟೋ ಹಿಡಿದು ಅಂತ ರಾಷ್ಟ್ರೀಯ ಮಹಿಳಾ ಆಯೋಗ ಕಳಿಸಿದ್ರು. ಬಿಜೆಪಿಯವರು ಯಾಕ್ ಮಾತಾಡುತ್ತಿಲ್ಲ. ಅವರ ಕುಟುಂಬದವರು ಹೌದೋ ಇಲ್ಲವೋ ನೀವು ಹೇಳಬೇಕು. ಬಿಜೆಪಿ ನಾಯಕರು ಯಾಕ್ ಮಾತಾಡುತ್ತಿಲ್ಲ. ವಾರ ಹತ್ತು ದಿನದ ಮುಂಚೆ ದೂರು ಕೊಟ್ಟಿದ್ದರೆ ಆಕ್ಷನ್ ತೆಗೆದುಕೊಳ್ಳುತ್ತಿದ್ದೇವು. ಮಹಿಳಾ ಆಯೋಗಕ್ಕೆ ದೂರು ಕೊಟ್ಟಿದ್ದಾರೆ.
ಮೊದಲು ಪ್ರತಿಭಟನೆ ಮಾಡಲಿ. ಕುಮಾರಸ್ವಾಮಿ ಯಾವ ಕರೆ ಕೊಡುತ್ತೀಯಾ ಕೊಡು. ಕರೆ ಕೊಡಬೇಕು ನೀನು…ನೀನು ಕೊಡಲಿ ಅಂತನೇ ಹೇಳುತ್ತಿದ್ದೇನೆ. ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಹೇಳಿದ್ರು. ಇದು ಒಪ್ಪಿಕೊಂಡಿದ್ದಾರೆ. ಕುಟುಂಬ ಅಲ್ಲ ಅಂತ ಹೇಳಿದ್ರೆ ಹೆಂಗ್ ಒಪ್ಪಲು ಆಗುತ್ತೆ. ಹೆಚ್. ಡಿ ಎಂದರೆ ಏನು. ಹೆಚ್ ಡಿ ರೇವಣ್ಣ ಎಂದರೆ ಹೊಳೆನರಸೀಪುರ ದೇವೇಗೌಡರ ಮಗ. ಅಂತ. ಹೆಚ್ ಡಿ ಕುಮಾರಸ್ವಾಮಿ ಎಂದರೆ ಹೊಳೆನರಸೀಪುರ ದೇವೇಗೌಡರ ಮಗ ಅಂತ.
ಮಹಿಳೆಯರಿಗೆ ರಕ್ಷಣೆ ಕೊಡಬೇಕು. ಮರ್ಯಾದೆ ಹೋಗುತ್ತದೆ. ಇವರ ಚಟಕ್ಕೆ ವಿಡಿಯೋ ಮಾಡಿಕೊಂಡು ಪದೆ ಪದೆ ಬರಬೇಕು ಎಂದು. ಭಗವಂತ ಇದನ್ನ ಕ್ಷಮಿಸಲ್ಲ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವಾಗ ಯಾರು ಜೊತೆಗೆ ಇದ್ದರು. ಯಾರು ಯಾರಿಗೆ ಕರೆ ಮಾಡಿದ್ರು ಕೇಳಿ. ಈ ವಿಚಾರದಲ್ಲಿ ಬಿಜೆಪಿಯವರ ಸ್ಟ್ಯಾಂಡ್ ಹೇಳಬೇಕು. ಪ್ರಹ್ಲಾದ್ ಜೋಶಿ, ಸುನೀಲ್ ಕುಮಾರ್, ಯತ್ನಾಳ್, ಬೊಮ್ಮಾಯಿ, ಶೋಭಕ್ಕ ಯಾಕ್ ಮಾತಾಡುತ್ತಿಲ್ಲ. ಅಶೋಕ್ ವಿಪಕ್ಷ ನಾಯಕರಾದವರು, ಅವರ ಪಾರ್ಟಿಯವರು ನೋಡಿಕೊಳ್ಳುತ್ತಾರೆ ಎಂದು ಹೇಳ್ತಾರೆ. ಬಿಜೆಪಿಯವರು ಸ್ವಲ್ಪ ಪ್ರಾಬ್ಲಮ್ ಇದೆ ಎಂದು ಹೇಳಿದ್ದರು ಬ್ರದರ್ . ಐ ವಿಲ್ ಟೇಕ್ ಕೇರ್ ಎಂದು ದೊಡ್ಡವರು ಹೇಳಿದ್ದಾರೆ ಬ್ರದರ್ ಎಂದು ಹೇಳಿದ್ದಾರೆ ಎಂದು ಕುಮಾರಸ್ವಾಮಿ ಶೈಲಿಯಲ್ಲೇ ಹೆಚ್ಡಿಕೆಗೆ ಡಿಕೆ ಶಿವಕುಮಾರ್ ತಿರುಗೇಟು ಕೊಟ್ಟಿದ್ದಾರೆ.