ಬೆಂಗಳೂರು :ಬೆಂಗಳೂರು ನಗರದ ಸಂಚಾರ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ವ್ಹೀಲಿಂಗ್
ಮಾಡುತ್ತಿದ್ದ 12 ಮಂದಿಯನ್ನು ಬಂಧಿಸಿದ್ದಾರೆ.
ವಿವಿಧ ರಸ್ತೆಗಳು ಮತ್ತು ಮೇಲ್ಸೇತುವೆಗಳ ಮೇಲೆ ವ್ಹೀಲಿಂಗ್ ಮಾಡುತ್ತಿದ್ದ ಸವಾರರಿಂದ 10 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಜತೆಗೆ, 10 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲೂ ಇದೇ ರೀತಿಯ ಕಾರ್ಯಾಚರಣೆ ನಡೆಸಿ ವ್ಹೀಲಿಂಗ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.