ವ್ಹೀಲಿಂಗ್;‌ ಮೂವರ ಬಂಧನ

Most read



ಬೆಂಗಳೂರು: ಸಾರ್ವಜನಿಕ ರಸ್ತೆಗಳಲ್ಲಿ ದ್ವಿಚಕ್ರ ವಾಹನದಲ್ಲಿ ವ್ಹೀಲಿಂಗ್‌  ಮಾಡುತ್ತಿದ್ದವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಸಂಚಾರ ವಿಭಾಗದ  ಪಶ್ಚಿಮ ಉಪವಿಭಾಗದ ಪೊಲೀಸರು ಮೂವರು ವಾಹನ ಸವಾರರನ್ನು ಬಂಧಿಸಿದ್ದಾರೆ. ಬ್ಯಾಟರಾಯನಪುರದ ಇಬ್ರಾಹಿಂ ಪಾಷಾ (19), ಮಾಗಡಿ ರಸ್ತೆಯ ಚರಣ್‌(20) ಮತ್ತು ಮನೀಶ್‌(21) ಬಂಧಿತ ಆರೋಪಿಗಳು. ಇವರಿಂದ ಮೂರು ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.

ಸಾರ್ವಜನಿಕ ರಸ್ತೆಗಳಲ್ಲಿ ದ್ವಿಚಕ್ರ ವಾಹನಗಳಲ್ಲಿ ವ್ಹೀಲಿಂಗ್ ಮಾಡುವುದು ಮಿತಿ ಮೀರುತ್ತಿದೆ. ಸಾಮಾಜಿಕ ಜಾಲತಾಣ ಮತ್ತು ಸಾರ್ವಜನಿಕರ ಮಾಹಿತಿ ಆಧರಿಸಿ ವ್ಹೀಲಿಂಗ್ ಮಾಡುವವರ ಪತ್ತೆಗೆ ಸಂಚಾರ ಪಶ್ಚಿಮ ಉಪವಿಭಾಗದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿತ್ತು.

ಈ ಸಂಬಂಧ ಬ್ಯಾಟರಾಯನಪುರ ಸಂಚಾರ ಠಾಣೆಯಲ್ಲಿ ಒಂದು ಮತ್ತು ಮಾಗಡಿ ರಸ್ತೆ ಸಂಚಾರ ಠಾಣೆಯಲ್ಲಿ ಎರಡು ಸೇರಿ ಒಟ್ಟು ಮೂರು ಪ್ರಕರಣಗಳನ್ನು ದಾಖಲಿಸಲಾಗಿದೆ. ವಿಶೇಷ ಕಾರ್ಯಾಚರಣೆ ನಿರಂತರವಾಗಿ ಮುಂದುವರೆಯಲಿದೆ ಎಂದು ಸಂಚಾರ ಪಶ್ಚಿಮ ವಿಭಾಗದ ಪೊಲೀಸರು ತಿಳಿಸಿದ್ದಾರೆ.

More articles

Latest article