ಜೆ.ಸಿ. ರಸ್ತೆಯಲ್ಲಿ ವೈಟ್ ಟಾಪಿಂಗ್; ವಾಹನ ಸಂಚಾರಕ್ಕೆ ನಿರ್ಬಂಧ:

Most read

ಜಯನಗರ, ಜೆ ಪಿ ನಗರ ಭಾಗದ ವಾಹನಗಳೆಲ್ಲಾ ಜೆ.ಸಿ. ರಸ್ತೆ ಮೂಲಕವೇ ಟೌನ್ ಹಾಲ್, ವಿಧಾನಸೌಧ ಕಡೆಗೆ ಪ್ರವೇಶಿಸುತ್ತವೆ. ಈ ರಸ್ತೆಯಲ್ಲಿ ವಾಹನಗಳ ಸಂಚಾರ ಇಳಿಮುಖ ಆಗುವುದೇ ಇಲ್ಲ. ಇದೀಗ ಈ ರಸ್ತೆಯಲ್ಲಿ ವೈಟ್ ಟಾಪಿಂಗ್ ಮಾಡಲು ಉದ್ದೇಶಿಸಲಾಗಿದ್ದು, ರಸ್ತೆ ತಾತ್ಕಾಲಿಕವಾಗಿ ಬಂದ್ ಆಗಲಿದೆ.ಜೆ.ಸಿ. ರಸ್ತೆಯ ಎರಡೂ ಬದಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಜೆ.ಸಿ. ರಸ್ತೆಯಲ್ಲಿ ನಾಲಾ ರಸ್ತೆ
ಜಂಕ್ಷನ್‌ನಿಂದ ಪುರಭವನ ಜಂಕ್ಷನ್‌ವರೆಗೆ ವೈಟ್
ಟಾಪಿಂಗ್ ಕಾಮಗಾರಿ ನಡೆಸಲು ಬಿಬಿಎಂಪಿ
ಉದ್ದೇಶಿಸಿದ್ದು, ಈ ಮಾರ್ಗದಲ್ಲಿ ವಾಹನ
ಸಂಚಾರವನ್ನು ಭಾಗಶಃ ನಿಷೇಧಿಸಲಾಗುತ್ತದೆ.

ಇಂದಿನಿಂದ ಕಾಮಗಾರಿ ಆರಂಭವಾಗಲಿದ್ದು ಮುಕ್ತಾಯ ಆಗುವವರೆಗೆ ಈ ಮಾರ್ಗದಲ್ಲಿ ವಾಹನ ಸಂಚಾರ ನಿಧಾನಗತಿಯಲ್ಲಿ ಇರಲಿದೆ. ಆದ್ದರಿಂದ ಸಾರ್ವಜನಿಕರು ಸಹಕರಿಸುವಂತೆ ಸಂಚಾರ ಪೊಲೀಸರು ಕೋರಿದ್ದಾರೆ. ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.

ಪರ್ಯಾಯ ಮಾರ್ಗ: ಹೊಸೂರು ರಸ್ತೆಯಿಂದ ಜೆ.ಸಿ.
ರಸ್ತೆ ಮೂಲಕ ಮೆಜೆಸ್ಟಿಕ್ ಹಾಗೂ ಬೆಂಗಳೂರು
ಉತ್ತರ ದಿಕ್ಕಿನ ಕಡೆಗೆ ಸಂಚರಿಸುತ್ತಿದ್ದ ವಾಹನಗಳು
ಲಾಲ್‌ಬಾಗ್ ಮುಖ್ಯದ್ವಾರದ ಬಳಿ ಬಲಕ್ಕೆ ತಿರುವು
ಪಡೆದು ಕೆ.ಎಚ್. ರಸ್ತೆ, ಶಾಂತಿನಗರ, ರಿಂಡ್
ಆರ್.ಆರ್. ರಸ್ತೆಯ ಮೂಲಕ ಹಡ್ನನ್ ವೃತ್ತ
ತಲುಪಬಹುದಾಗಿದೆ.

ಸೌತ್ ಎಂಡ್ ವೃತ್ತದಿಂದ ಜೆ.ಸಿ. ರಸ್ತೆಯ ಮೂಲಕ
ಮೆಜೆಸ್ಟಿಕ್ ಹಾಗೂ ಬೆಂಗಳೂರು ಉತ್ತರ ದಿಕ್ಕಿನ ಕಡೆಗೆ ಸಂಚರಿಸುತ್ತಿದ್ದ ವಾಹನಗಳು, ಮಿನರ್ವ ವೃತ್ತದ ಬಳಿ ಎಡಕ್ಕೆ ತಿರುವು ಪಡೆದು ಲಾಲ್ ಬಾಗ್ ಪೋರ್ಟ್ ರಸ್ತೆ ಹಾಗೂ ಕೆ ಆರ್ ರಸ್ತೆ ಮೂಲಕ ಕೆ ಆರ್ ಮಾರುಕಟ್ಟೆ ತಲುಪಿ ಎಸ್ ಜೆಪಿ ರಸ್ತೆ ಪುರಭವನ ತಲುಪಬಹುದಾಗಿದೆ.

More articles

Latest article