ಗುಜರಾತಿನಲ್ಲಿ ನರಮೇಧ ಮಾಡಿದವರು ಯಾರು..? ಯತೀಂದ್ರ ಸಿದ್ದರಾಮಯ್ಯ ಪ್ರಶ್ನೆ

ಚಾಮರಾಜನಗರ: ಅಮಿತ್ ಶಾ ಗೂಂಡಾ, ರೌಡಿ. ಇವರಿಗೆ ಕ್ರಿಮಿನಲ್ ಹಿನ್ನೆಲೆ ಇದೆ ಎಂದು ನೇರ ವಾಗ್ದಾಳಿ ನಡೆಸಿರುವ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಗುಜರಾತ್ ನಲ್ಲಿ ನರಮೇಧ ಮಾಡಿದವರು ಯಾರು ಎಂದು ಪ್ರಶ್ನಿಸಿದ್ದಾರೆ.

ಚಾಮರಾಜನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಬಿಜೆಪಿಗೆ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ.

ಗುಜರಾತ್‌ನಲ್ಲಿ ನರಮೇಧ ಮಾಡಿದವರು ಯಾರು? ಇಂತಹವರು ದೇಶದ ಉನ್ನತ ಸ್ಥಾನದಲ್ಲಿದ್ದಾರೆ. ಇಂತವರನ್ನ ಪ್ರಧಾನಿ ಮೋದಿಯವರು ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆ. ದೇಶದ ಇತಿಹಾಸದಲ್ಲೇ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಸರ್ಕಾರ ಎಂದರೆ ಅದು ಮೋದಿ ಸರ್ಕಾರ. ದೇಶದಲ್ಲಿ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇನೆ ಅಂತ ಹೇಳಿದ್ದರು. ಈಗ ನಿರೋದ್ಯೋಗಿಗಳಿಗೆ ಉದ್ಯೋಗ ಸೃಷ್ಟಿ ಮಾಡುವುದು ಕೇಂದ್ರ ಸರ್ಕಾರದ ಹೊಣೆ ಅಲ್ಲ ಅಂತ ಹೇಳುತ್ತಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ವಿದೇಶದಲ್ಲಿರುವ ಕಪ್ಪು ಹಣ ವಾಪಸ್ ತರುತ್ತೇವೆ ಎಂದಿದ್ದರು, ತಂದರೇ? ಸ್ವಿಸ್ ಬ್ಯಾಂಕ್ ಅಲ್ಲಿ ಯಾರ್ ಯಾರ ಖಾತೆಯಲ್ಲಿ ಕಪ್ಪು ಹಣ ಇದೆ ಎಂಬ ಪಟ್ಟಿಯನ್ನು ಬಿಡುಗಡೆ ಮಾಡಲಿಲ್ಲ. ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನ ಬಂದ್ರೆ ಸಂವಿಧಾನ ಬದಲಾವಣೆ ಮಾಡೋದೇ ನಮ್ಮ ಹಿಡನ್ ಅಜೆಂಡಾ ಎಂದು ಬಿಜೆಪಿ ನಾಯಕರೇ ಹೇಳಿದ್ದಾರೆ. ಕೊಟ್ಟ ಮಾತುಗಳನ್ನು ಈಡೇರಿಸದೆ ಈಗ ಚುನಾವಣೆಯ ಹೊತ್ತಲ್ಲಿ ಮತ್ತೆ ಭರವಸೆ ನೀಡುತ್ತಿರುವ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಕೂಡದು ಎಂದು ಅವರು ಹೇಳಿದ್ದಾರೆ.

More articles

Latest article

Most read